ಸಂತೇಮರಹಳ್ಳಿ: ಇಲ್ಲಿನ ಬಸ್ ನಿಲ್ದಾಣ ಹಾಗೂ ಅಕ್ಕಪಕ್ಕದ ಸ್ಥಳಗಳಲ್ಲಿ ಶುಕ್ರವಾರ ಮಧ್ಯಾಹ್ನ ಬೀದಿ ನಾಯಿಯೊಂದು 30ಕ್ಕೂ ಹೆಚ್ಚು ಮಂದಿಗೆ ಕಚ್ಚಿ ಗಾಯಗೊಳಿಸಿದೆ.

ಬಸ್ ನಿಲ್ದಾಣದಲ್ಲಿ ಅಡ್ಡಾಡುತ್ತಿದ್ದ ನಾಯಿ ಪ್ರಯಾಣಿಕರಿಗೆ ಹಾಗೂ ನೀರಾವರಿ ವಸತಿ ಗೃಹದ ಸಮೀಪ ಹಲವು ಜನರಿಗೆ ಕಚ್ಚಿದೆ. ಸಮುದಾಯ ಆರೋಗ್ಯ ಕೆಂದ್ರಕ್ಕೆ 20 ಮಂದಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಉಳಿದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಸಾರ್ವಜನಿಕರಿಗೆ ಕಚ್ಚಿರುವ ನಾಯಿ ಹಿಡಿಯಲು ಗ್ರಾಮ ಪಂಚಾಯಿತಿಯವರು ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ ಸಿಕ್ಕಿಲ್ಲ. ಇದರಿಂದ ಗ್ರಾಮದ ನಿವಾಸಿಗಳು ಆತಂಕದಲ್ಲಿದ್ದಾರೆ.

‘ಸಾರ್ವಜನಿಕರಿಗೆ ನಾಯಿ ಕಚ್ಚುತ್ತಿರುವ ಹಿನ್ನೆಲೆಯಲ್ಲಿ ನಿವಾಸಿಗಳು ಮಕ್ಕಳನ್ನು ಹೊರಗೆ ಬಿಡದೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಪಂಚಾಯಿತಿ ಸಿಬ್ಬಂದಿ ನಾಯಿ ಹಿಡಿಯುವ ಕಾರ್ಯಾಚರಣೆ ನಡೆಸಿದ್ದು, ಪಶು ಆಸ್ಪತ್ರೆಯವರಿಗೆ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-1717764721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.