ಚಾಮರಾಜನಗರ: ಜಿಲ್ಲೆಯ ಯಾವುದೇ ಭಾಗದಲ್ಲಿ ಜನ-ಜಾನುವಾರುಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತುರ್ತು ಪರ್ಯಾಯ ವ್ಯವಸ್ಥೆ ಮಾಡುವ ಮೂಲಕ ನೀರು ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇನಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಅಲ್ಲಿಯವರೆಗೂ ಜನ, ಜಾನುವಾರುಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಬೇಕಿದೆ.

ಬೋರ್ವೆಲ್, ಟ್ಯಾಂಕರ್, ತೆರೆದ ಬಾವಿ, ಕೈಪಂಪ್ ಸೇರಿದಂತೆ ಇತರೆ ಪರ್ಯಾಯ ಮೂಲಗಳ ಮೂಲಕ ಕುಡಿಯುವ ನೀರು ಪೂರೈಸಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಸಮಸ್ಯೆಗಳನ್ನು ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸೂಚನೆ ನೀಡಿದರು.

ಪ್ರತಿ ವಾರ ಹಾಗೂ 15 ದಿನಗಳಿಗೊಮ್ಮೆ ಕುಡಿಯುವ ನೀರಿನ ಲಭ್ಯತೆ, ಪೂರೈಕೆ ಕುರಿತು ತಾಲೂಕುಮಟ್ಟದ ಟಾಸ್ಕ್ಪೋರ್ಸ್ ಸಭೆ ನಡೆಸಿ ಆಯಾ ಭಾಗದ ಸಮಸ್ಯೆಗಳನ್ನು ಅರಿಯಬೇಕು. ಜಿಲ್ಲೆಯ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು.

ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು, ಗ್ರಾಮಗಳಲ್ಲಿರುವ ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿಗಳನ್ನು ಸ್ವಚ್ಚಗೊಳಿಸಿ ಪ್ರತಿನಿತ್ಯ ನೀರು ತುಂಬಿಸಬೇಕು. ಮೇವಿನ ಕೊರತೆಯಾಗದಂತೆ ಎಚ್ಚರವಹಿಸಬೇಕು, ಸಮಸ್ಯೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನೀರಿನ ಲಭ್ಯತೆ ಪರಿಶೀಲಿಸಿ ಅಗತ್ಯವಿರುವೆಡೆ ಹೊಸ ಬೋರ್ವೆಲ್ ಕೊರೆಸಬೇಕು, ರೀಡ್ರಿಲ್, ರೀಬೋರ್ ಮಾಡಿಸಿ ನೀರೆತ್ತಬಹುದು, ಅಗತ್ಯಬಿದ್ದರೆ ಖಾಸಗಿ ಬೋರ್ವೆಲ್ಗಳನ್ನು ವಶಕ್ಕೆ ಪಡೆದು ಬಳಸಿಕೊಳ್ಳಬೇಕು. ಟ್ಯಾಂಕರ್ಗಳ ಮೂಲಕವೂ ನೀರು ಪೂರೈಸಬೇಕು. ಕುಡಿಯುವ ನೀರಿನ ಪೈಪ್ಲೈನ್ಗೆ ಚರಂಡಿ ನೀರು ಸೇರದಂತೆ ಎಚ್ಚರ ವಹಿಸಬೇಕು.

ನಿಯಮಿತವಾಗಿ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ಶುದ್ಧತೆ ಖಚಿತಪಡಿಸಿಕೊಳ್ಳಬೇಕು. ಎಲ್ಲ ಪಂಚಾಯಿತಿ ಅಧಿಕಾರಿಗಳು ಗ್ರಾಮವಾರು ಸಮಸ್ಯೆಗಳ ಪಟ್ಟಿಮಾಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲೆಯಾದ್ಯಂತ ಜಲಜೀವನ್ ಮಿಷನ್ ಕಾಮಗಾರಿ ಬಾಕಿ ಇದೆ. ಕೆಲವೆಡೆ ಪೈಪ್ಲೈನ್ ಅಳವಡಿಸುವ ಕಾಮಗಾರಿ ಅಪೂರ್ಣವಾಗಿದೆ. ಕಾಮಗಾರಿ ಪೂರ್ಣಗೊಳಿಸದಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಕುಡಿಯುವ ನೀರಿನ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ತೊಂದರೆ ನೀಡಬಾರದು ಎಂದು ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಿದರು.

ಇದೇವೇಳೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನದ ಜಾಗೃತಿ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-37-318128230

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.