ಚಾಮರಾಜನಗರ: ತೀವ್ರ ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದರಿಂದ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಗರದ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಡಳಿತ ಹಾಗೂ ನಗರಸಭೆಯ ಅಧಿಕಾರಿಗಳೊಂದಿಗೆ ಪಟ್ಟಣದ 1ನೇ ವಾರ್ಡಿನಲ್ಲಿರುವ ಸೋಮವಾರಪೇಟೆ ಹಾಗೂ 2ನೇ ವಾರ್ಡಿನಲ್ಲಿರುವ ಗಾಳಿಪುರ ಹಾಗೂ ಹಂದಿಜೋಗಿ ಕಾಲೊನಿಗೆ ಭೇಟಿ ನೀಡಿದ ಸಚಿವರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ನಿವಾಸಿಗಳಿಂದ ಅಹವಾಲು ಆಲಿಸಿದರು.

‘ಬಡಾವಣೆಗಳಿಗೆ ನಿಯಮಿತವಾಗಿ ಕುಡಿಯುವ ನೀರಿನ ಪೂರೈಕೆಯಾಗುತ್ತಿಲ್ಲ. ಬೇಸಿಗೆಯಲ್ಲಿ ನೀರಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಟ್ಯಾಂಕರ್ ಮೂಲಕ ಪೂರೈಸುವ ನೀರು ಸಾಕಾಗುತ್ತಿಲ್ಲ. ಕೂಡಲೇ ಸಮರ್ಪಕ ನೀರು ಒದಗಿಸಬೇಕು’ ಎಂದು ನಿವಾಸಿಗಳು ಮನವಿ ಮಾಡಿದರು.

‘ಬಡಾವಣೆಯಲ್ಲಿ ನಿಯಮಿತವಾಗಿ ಕಸ ವಿಲೇವಾರಿಯಾಗುತ್ತಿಲ್ಲ. ಚರಂಡಿಗಳಲ್ಲಿ ತುಂಬಿಕೊಂಡಿರುವ ಹೂಳು ಎತ್ತದೆ. ಅನೈರ್ಮಲ್ಯ ಉಂಟಾಗಿದೆ.ದುರ್ವಾಸನೆಗೆ ಸ್ಥಳೀಯರು ವಾಸ ಮಾಡಲಾಗುತ್ತಿಲ್ಲ. ಮಳೆ ಬಂದರೆ ಚರಂಡಿ ಕಟ್ಟಿಕೊಂಡು ರಸ್ತೆಗೆ ತ್ಯಾಜ್ಯ ಹರಿದು ಸಮಸ್ಯೆ ಗಂಭೀರವಾಗುತ್ತದೆ’ ಎಂದು ದೂರು ಹೇಳಿಕೊಂಡರು.

ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ‘ನಾಗರಿಕರಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು ಒದಗಿಸಬೇಕು. ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದರು.

ಹಂದಿಜೋಗಿ ಕಾಲೊನಿಯ ನಿವಾಸಿಗಳು ‘ಖಾಸಗಿ ಜಾಗದಲ್ಲಿ ವಾಸ ಮಾಡುತ್ತಿದ್ದು, ಜಾಗ ತೆರವುಗೊಳಿಸುವಂತೆ ಒತ್ತಡ ಹಾಕುತ್ತಿದ್ದಾರೆ, ಬದಲಿ ಮನೆಗಳ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.

ಶಾಸಕ ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿ ಹಂದಿಜೋಗಿ ಸಮುದಾಯದವರಿಗೆ ಉತ್ತುವಳ್ಳಿ ಗ್ರಾಮದಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಜಾಗ ಗುರುತಿಸಲಾಗಿದೆ. ಶೀಘ್ರ ಅಲ್ಲಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಲಾಗುತ್ತದೆ’ ಎಂದು ಭರವಸೆ ನೀಡಿದರು.

ಸೋಮವಾರಪೇಟೆ ಹಾಗೂ ಗಾಳಿಪುರ ಬಡಾವಣೆಯ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದು ತುರ್ತು ಹೆಚ್ಚುವರಿ ಬೋರ್ವೆಲ್ ಕೊರೆಯಿಸಿ ಸಮಸ್ಯೆಯನ್ನು ಬಗೆಹರಿಸಬೇಕು, ವಾರಕ್ಕೊಮ್ಮೆಯಾದರೂ ಕಸ ಸಂಗ್ರಹಣೆ ಮಾಡಬೇಕು. ಚರಂಡಿಗಳು ಸ್ವಚ್ಛತೆಯಿಲ್ಲದೆ, ದುರ್ವಾಸನೆಯಿಂದ ಕೂಡಿದ್ದು ಸ್ವಚ್ಛಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಜನ-ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು ಮಾಡಬೇಕು, ಕುಡಿಯುವ ನೀರಿನ ಸಮಸ್ಯೆ ಸಂಬಂಧ ದೂರುಗಳು ಬಾರದಂತೆ ಸೂಕ್ತ ಕ್ರಮ ವಹಿಸಬೇಕು. ಬಡಾವಣೆಗಳ ಸ್ವಚ್ಛತೆಗೆ ಗಮನ ಹರಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ವೆಂಕಟೇಶ್, ನಗರಸಭೆ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-37-160325892

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.