ಕೊಳ್ಳೇಗಾಲ: ನಗರಸಭೆಯಲ್ಲಿ ಇ- ಸ್ವತ್ತು ವಿಳಂಬ ಆಗುತ್ತಿರುವುದನ್ನು ಖಂಡಿಸಿ ನಗರಸಭೆ ಮಾಜಿ ನಾಮನಿರ್ದೇಶಿತ ಸದಸ್ಯ ಮಧುಚಂದ್ರ ಅವರು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಅರ್ಧಕ್ಕೆ ಸ್ಥಗಿತಗೊಳಿಸಿದರು.

ನಗರದ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಹಾಗೂ ದೇವಲ ಮಹರ್ಷಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೊರಟ ಪಾದಯಾತ್ರೆಯನ್ನು ಬಾಪುನಗರದ ಬಡಾವಣೆ ಬಳಿ ಪೊಲೀಸ್ ಅಧಿಕಾರಿಗಳ ಆದೇಶ ಹಾಗೂ ಪೌರಾಯುಕ್ತರ ಮನವಿ ಮೇರೆಗೆ ನಿಲ್ಲಿಸಲಾಯಿತು.

ಮಧುಚಂದ್ರ ಅವರು ಕಳೆದ ತಿಂಗಳು ನಗರಸಭೆ ಮುಂದೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು, ಆಗ ಪೌರಾಯುಕ್ತೆ ರುದ್ರಮ್ಮ ಶರಣಯ್ಯ ‘ಏ.10 ರೊಳಗೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದ್ದರು. ಹಾಗಾಗಿ ಮಧುಚಂದ್ರ ಅವರು ಉಪವಾಸ ಕೈಬಿಟ್ಟಿದ್ದರು. ಏ.10 ಕಳೆದರೂ ನಗರಸಭೆಯಲ್ಲಿ ಯಾವುದೇ ಇ–ಸ್ವತ್ತು ಸೇರಿದಂತೆ ಇತರೆ ಕೆಲಸಗಳು ಆಗುತ್ತಿಲ್ಲ ಎಂದು ಆರೋಪಿಸಿ ಶುಕ್ರವಾರ ಬೆಳಿಗ್ಗೆ ಚಾಮರಾಜನಗರಕ್ಕೆ ಪಾದಯಾತ್ರೆ ಆರಂಭಿಸಲು ನಿರ್ಧರಿಸಿದ್ದರು.

ಸ್ಥಳಕ್ಕೆ ಆಗಮಿಸಿದ್ದ ಪೌರಾಯುಕ್ತೆ ರುದ್ರಮ್ಮ ಶರಣಯ್ಯ, ‘ಈಗಾಗಲೇ ನಗರಸಭೆಯಲ್ಲಿ ಕೆಲಸ ಕಾರ್ಯಗಳು ಆಗುತ್ತಿವೆ, ಹಾಗಾಗಿ ಇನ್ನು ಒಂದು ತಿಂಗಳ ಒಳಗೆ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಮುಂದಿನ ಗುರುವಾರ ಸಾರ್ವಜನಿಕರ ಸಭೆ ಕರೆದು ಸ್ಥಳದಲ್ಲೇ ಬಗೆಹರಿಸುತ್ತೇವೆ’ ಎಂದು ಮನವೊಲಿಸಿದ ನಂತರ ಪ್ರತಿಭಟನೆ ಕೈಬಿಟ್ಟು ವಾಪಸ್ ತೆರಳಿದರು.

ಈ ವೇಳೆ ಮಾತನಾಡಿದ ಮಧುಚಂದ್ರ, ‘ಇ-ಸ್ವತ್ತು ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹೋರಾಟವನ್ನು ಹಿಂತೆಗೆದುಕೊಳ್ಳಲಾಗಿದೆ. ಈ–ಸ್ವತ್ತು ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಿ ಕೊಡುವುದಾಗಿ ಒಪ್ಪಿಕೊಂಡಿದ್ದಾರೆ. ಮುಖ್ಯವಾಗಿ ಸಾರ್ವಜನಿಕರ ಸಭೆಯನ್ನು ಕರೆದು ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಹೇಳಿದ ಹಿನ್ನೆಲೆ ಪ್ರತಿಭಟನೆಯನ್ನು ಕೈಬಿಟ್ಟಿದ್ದೇನೆ’ ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಪರಮೇಶ್ವರಯ್ಯ, ಮಾಜಿ ಸದಸ್ಯ ನಟರಾಜು, ಕೆ.ಕೆ.ಮೂರ್ತಿ, ಸೋಮಣ್ಣ, ಮುಖಂಡ ವರದರಾಜು, ರೈಲ್ವೆ ನಿಂಗರಾಜು, ವಾಸಿಕ್, ಭಾಸ್ಕರ್, ಲಿಂಗರಾಜು, ಮಹೇಶ್, ಮರಿಸಿದ್ದಯ್ಯ, ಕಿರಣ್, ಶಂಕರ್, ನಂಜುಂಡ, ನಾಗರಾಜು, ಲಿಂಗಣ್ಣ, ಇಸಾದ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-2049281372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.