ಮಹದೇಶ್ವರ ಬೆಟ್ಟ: ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಾಗದಿದ್ದರೆ ದಯಾಮರಣ ನೀಡಬೇಕು ಎಂದು ವೃದ್ಧೆ ಕೆಂಪನಮ್ಮ ಎಂಬುವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಮೆದಗನಾಣೆ ಪೋಡು ಬೆಳಕು ಕಂಡಿಲ್ಲ. ಗ್ರಾಮಕ್ಕೆ ಸಮರ್ಪಕ ರಸ್ತೆ ನಿರ್ಮಾಣ ಮಾಡಿಲ್ಲ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಲ್ಲ. ಗ್ರಾಮಕ್ಕೆ ಮೂಲಸೌಕರ್ಯಕ್ಕೆ ಒತ್ತಾಯಿಸಿ ಕಳೆದ ಐದು ದಿನಗಳಿಂದ ಉಪವಾಸ ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಸ್ಪಂದಿಸಿಲ್ಲ. ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ಇಲ್ಲದೆ ರಾತ್ರಿಯ ಹೊತ್ತು ವಿಷಜಂತುಗಳು ಹಾಗೂ ಕಾಡುಪ್ರಾಣಿಗಳ ದಾಳಿ ಭೀತಿ ಎದುರಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಕೂಡಲೇ ಸರ್ಕಾರ ವಿದ್ಯುತ್ ಸಂಪರ್ಕ ನೀಡಬೇಕು, ಇಲ್ಲವಾದರೆ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ಕೆಂಪನಮ್ಮ ಒತ್ತಾಯಿಸಿದ್ದಾರೆ.

ಇಬ್ಬರು ಅಸ್ವಸ್ಥ; ಮೆದಗಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಸಹಿತ ಮೂಲಸೌಕರ್ಯಕ್ಕೆ ಒತ್ತಾಯಿಸಿ ಸೋಲಿಗರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮುಂದುವರಿದಿದ್ದು ಬುಧವಾರ ಇಬ್ಬರು ಮಹಿಳೆಯರು ಅಸ್ವಸ್ಥಗೊಂಡು ಸ್ಥಳದಲ್ಲಿಯೇ ಚಿಕಿತ್ಸೆ ನೀಡಲಾಯಿತು.

ಧರಣಿಯಲ್ಲಿ ಭಾಗವಹಿಸಿದ್ದ ಮಾದೇವಿ (30) ಹಾಗೂ ಶಿವಮ್ಮ (34) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆರೋಗ್ಯ ಇಲಾಖೆಯ ಸಿಬ್ಬಂದಿ ಪರೀಕ್ಷಿಸಿ ಚಿಕಿತ್ಸೆ ನೀಡಿದರು.

ಮಹದೇಶ್ವರ ಬೆಟ್ಟ: ‘ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಾಗದಿದ್ದರೆ ದಯಾಮರಣ ನೀಡಬೇಕು’ ಎಂದು ವೃದ್ಧೆ ಕೆಂಪನಮ್ಮ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

‘ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಮೆದಗನಾಣೆ ಪೋಡು ಬೆಳಕು ಕಂಡಿಲ್ಲ. ಸಮರ್ಪಕ ರಸ್ತೆ ನಿರ್ಮಾಣ ಮಾಡಿಲ್ಲ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಲ್ಲ. ಮೂಲಸೌಕರ್ಯಕ್ಕೆ ಒತ್ತಾಯಿಸಿ 5 ದಿನಗಳಿಂದ ಉಪವಾಸ ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಸ್ಪಂದಿಸಿಲ್ಲ. ರಾತ್ರಿಯ ಹೊತ್ತು ವಿಷಜಂತುಗಳು ಹಾಗೂ ಕಾಡುಪ್ರಾಣಿಗಳ ದಾಳಿ ಭೀತಿ ಎದುರಾಗಿದೆ. ಕೂಡಲೇ ಸರ್ಕಾರ ವಿದ್ಯುತ್ ಸಂಪರ್ಕ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಇಬ್ಬರು ಅಸ್ವಸ್ಥ: ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿರುವ ಮಾದೇವಿ (30) ಹಾಗೂ ಶಿವಮ್ಮ (34) ಅಸ್ವಸ್ಥಗೊಂಡರು. ಅವರಿಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-37-574374713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.