ಚಾಮರಾಜನಗರ: ‘ಏ.21ರಂದು ಶಾಂತಿಯುತ ಪ್ರತಿಭಟನೆ ಮಾಡಲು ನಿರ್ಧರಿಸಿದ್ದ ರೈತ ಸಂಘದ ಹೋರಾಟವನ್ನು ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ’ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಗುರುಪ್ರಸಾದ್ ಆರೋಪಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ 21ರಂದು ಗುಂಡ್ಲುಪೇಟೆಗೆ ಆಗಮಿಸಲಿದ್ದು 110 ಕೆರೆಕಟ್ಟೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಲಿದ್ದು ಈ ಸಂದರ್ಭ ರೈತ ಸಂಘ ಪ್ರತಿಭಟನೆಗೆ ಮುಂದಾಗಿತ್ತು. ಆದರೆ, ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ ಹೋರಾಟ ಮಾಡದಂತೆ ಬೆದರಿಕೆ ಹಾಕುತ್ತಿದ್ದಾರೆ’ ಎಂದು ದೂರಿದರು.

‘ಜಿಲ್ಲೆಯಲ್ಲಿ ನಾಲ್ಕು ಹಂತಗಳಲ್ಲಿ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಇದುವರೆಗೂ ಪೂರ್ಣಗೊಂಡಿಲ್ಲ. ಆದರೂ ಮತ್ತೆ 110 ಕೆರೆಗಳಿಗೆ ನೀರು ತುಂಬಿಸುವ ಹೊಸ ಯೋಜನೆಗೆ ಚಾಲನೆ ನೀಡುತ್ತಿರುವುದು ಹಾಸ್ಯಾಸ್ಪದ. ಗುಂಡ್ಲುಪೇಟೆ ತಾಲ್ಲೂಕಿನ ಕೆರೆಗಳಿಗೆ ಹಲವು ವರ್ಷಗಳಿಂದ ಪೂರ್ಣ ಪ್ರಮಾಣದ ನೀರು ಹರಿದಿಲ್ಲ’ ಎಂದು ಆರೋಪಿಸಿದರು.

‘ರೈತರ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅಡ್ಡಿಪಡಿಸುವುದು ಸರಿಯಲ್ಲ. ಸಕಾರಣ ಇಲ್ಲದ ಅನುಮತಿ ನಿರಾಕರಣೆ ಸಲ್ಲದು, ಮೂಲಭೂತ ಹಕ್ಕಿನ ಹರಣವಾಗಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಶಾಂತಿಯುತವಾಗಿ ಸಭೆ ಸೇರುವ ಹಕ್ಕನ್ನು ಮೊಟಕುಗೊಳಿಸಿದಂತಾಗುತ್ತದೆ. ಜಿಲ್ಲಾಧಿಕಾರಿಗಳು ಪ್ರತಿಭಟನೆಯ ನಿರಾಕರಣೆ ಆದೇಶ ರದ್ದುಪಡಿಸಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಸಂಚಾಲಕ ಮುರ್ತಿ ಬುದ್ದಿ, ಯಳಂದೂರು ತಾಲ್ಲೂಕು ಅಧ್ಯಕ್ಷ ಅಂಬಳೆ ಪುಟ್ಟಬುದ್ದಿ, ಪದಾಧಿಕಾರಿಗಳಾದ ಹಿರಿಕಾಟಿ ಚಿಕ್ಕಣ್ಣ, ರಂಗಸ್ವಾಮಿ, ಅಂಬಳೆ ವಿಜಿ, ಮಹದೇವಸ್ವಾಮಿ, ಮಹದೇವಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-37-1408177223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.