ಹನೂರು: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೀಡಲಾಗುತ್ತಿರುವ ಕೃಷಿ ಸಾಲ ಪಡೆದು ರೈತರು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ನರೇಂದ್ರ ಹೇಳಿದರು.

ಪಟ್ಟಣದ ಆರ್ಎಂಸಿ ಆವರಣದಲ್ಲಿ ಅಜ್ಜೀಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹೂಸ ಸದಸ್ಯರಿಗೆ ಕೆಸಿಸಿ ಬೆಳೆ ಸಾಲದ ಚೆಕ್ ವಿತರಿಸಿ ಅವರು ಮಾತನಾಡಿದರು.

95 ವರ್ಷಗಳ ಹಿಂದೆ ಪ್ರಾರಂಭಗೊಂಡ ಅಜ್ಜೀಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇಲ್ಲಿಯವರೆಗೂ ಯಾವುದೇ ಚ್ಯುತಿ ಬಾರದಂತೆ ನಡೆದುಕೊಂಡು ಬಂದಿದೆ. ಪ್ರಸ್ತುತ 63 ಮಂದಿ ಹೊಸ ಸದಸ್ಯರಿಗೆ ₹76.80 ಲಕ್ಷ ಬೆಳೆ ಸಾಲದ ಚೆಕ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ರೈತರ ಆರ್ಥಿಕ ಶಕ್ತಿ ವೃದ್ಧಿಗೆ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ಸರ್ಕಾರದ ಬೆಂಬಲದೊಂದಿಗೆ ನೀಡಲಾಗುತ್ತಿರುವ ಕೆಸಿಸಿ ಬೆಳೆ ಸಾಲವನ್ನು ರೈತರು ಸದುಪಯೋಗಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದರು.

ಸಹಕಾರ ಸಂಘಗಳು ರೈತರ ನಿಜವಾದ ಸ್ನೇಹಿತರಾಗಿದ್ದು, ಯಾವುದೇ ಕಷ್ಟ ಸಂದರ್ಭದಲ್ಲೂ ರೈತರೊಂದಿಗೆ ನಿಂತಿವೆ. ಹಾಗಾಗಿ ರೈತರು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ತಮ್ಮ ಸಂಘವು ಇನ್ನಷ್ಟು ಮೇಲಕ್ಕೆ ಏರಲು ತಾವೆಲ್ಲರೂ ಕೂಡ ಕೈಜೋಡಿಸಬೇಕು ಎಂದು ತಿಳಿಸಿದರು.

ಅಜ್ಜೀಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಶ್ರೀನಿವಾಸನಾಯ್ಕ, ನಿರ್ದೇಶಕ ಶಾಕೀರ್ ಪಾಷ, ಮಾದೇವ್, ಶಾಖಾ ವ್ಯವಸ್ಥಾಪಕ ಕುಮಾರಸ್ವಾಮಿ, ಮೇಲ್ವಿಚಾರಕ ಬಾಲಾಜಿ, ಸಂಘದ ಸಿಇಒ ರಾಜೇಶ್ವರಿ ಮತ್ತು ಆಡಳಿತ ಮಂಡಳಿಯವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-37-1912729417

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.