ಚಾಮರಾಜನಗರ: ರೈತರು ಖರೀದಿಸುವ ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಬಳಿ ಜಮಾಯಿಸಿದ ರೈತ ಮುಖಂಡರು ಸರ್ಕಾರದ ನಿರ್ಧಾರ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ‘ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದರಿಂದ ಬಗರ್ ಹುಕುಂ ಸಾಗುವಳಿದಾರರಿಗೆ, ಇನಾಂ ಜಮೀನು ಸಾಗುವಳಿದಾರರಿಗೆ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗುತ್ತಿದ್ದು ಕೂಡಲೇ ನಿಯಮವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಎಲ್ಲ ರೈತರನ್ನು ಎಫ್ಐಡಿ ವ್ಯಾಪ್ತಿಗೆ ತರಲು ಜಿಲ್ಲಾಡಳಿತ ಸಮರ್ಪಕ ಕ್ರಮ ಕೈಗೊಳ್ಳದೆ ನಿಯಮ ಜಾರಿಗೊಳಿಸಿರುವುದು ಸರಿಯಲ್ಲ. ದಾಖಲೆಗಳ ಕೊರತೆ, ಪೌತಿ ಖಾತೆ ಬದಲಾವಣೆ ಸಮಸ್ಯೆ ಇರುವ ರೈತರು ಎಫ್ಐಡಿ ಸಂಖ್ಯೆ ಹೊಂದಿರದೆ ರಸಗೊಬ್ಬರ ಖರೀದಿಗೆ ಸಮಸ್ಯೆಯಾಗಿದೆ. ಜಿಲ್ಲೆಯಲ್ಲಿ ಕೃಷಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಬೇಕು, ಹಸಿರು ಎಲೆ ಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕೃಷಿ ಯಂತ್ರೋಪಕರಣಗಳಿಗೆ ಹಾಕಲು ಕ್ಯಾನ್ಗಳಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ಖರೀದಿಗೆ ಅವಕಾಶ ನೀಡದಿರುವುದು ಸರಿಯಲ್ಲ. ಟ್ರ್ಯಾಕ್ಟರ್ ಸಹಿತ ಕೃಷಿ ಯಂತ್ರಗಳನ್ನು ಪೆಟ್ರೋಲ್ ಬಂಕ್ಗಳಿಗೆ ತಂದು ಇಂಧನ ತುಂಬಿಸುವುದಕ್ಕೆ ರೈತರಿಗೆ ಕಷ್ಟವಾಗುತ್ತಿದ್ದು ನಿರ್ಬಂಧವನ್ನು ಸಡಿಲಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರನ್ನು ಕೃಷಿಯಿಂದ ಒಕ್ಕಲು ಎಬ್ಬಿಸುವ ಕೆಲಸ ಮಾಡುತ್ತಿವೆ, ರೈತರ ಕೃಷಿ ಆದಾಯ ದ್ವಿಗುಣಗೊಳಿಸುವ ಬದಲು ರಸಗೊಬ್ಬರದ ಬೆಲೆ ಏರಿಕೆ ಮಾಡುವ ಮೂಲಕ ರೈತ ವಿರೋಧಿ ನಿಲುವು ತೆಗೆದುಕೊಂಡಿದೆ. ರಸಗೊಬ್ಬರದ ಕೊರತೆ ಎದುರಾಗಿದ್ದು ಕೃಷಿ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜು, ಪದಾಧಿಕಾರಿಗಳಾದ ಮಲೆಯೂರು ಮಹೇಂದ್ರ, ಸತೀಶ್, ಹೊನ್ನೇಗೌಡನಹಳ್ಳಿ ಮಹೇಶ್, ಗೌಡಿಕೆ ನಾಗಪ್ಪ, ಅರಳಿಕಟ್ಟೆ ಪ್ರಭುಸ್ವಾಮಿ, ಮುಕ್ಕಡಹಳ್ಳಿ ರಾಜು, ಪುಟ್ಟಮಲ್ಲೇಗೌಡ, ನಾಗರಾಜಪ್ಪ, ಉಮೇಶ್, ಶ್ರೀಕಂಠ ಮಹದೇವಸ್ವಾಮಿ, ಮಹದೇವಪ್ಪ, ನಸರತ್, ಮಂಜು, ಮಹದೇವಸ್ವಾಮಿ, ನಾಸಿರ್, ವೀರಭದ್ರಪ್ಪ, ಮಹೇಶ್, ಚಂದ್ರು, ಜನ್ನೂರ್ ಶಾಂತರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-37-372441099

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.