ಚಾಮರಾಜನಗರ: ಯಾವುದೇ ಬಗೆಯ ಜ್ವರ ಕಾಣಿಸಿಕೊಂಡರೂ ನಿರ್ಲಕ್ಷ್ಯ ತೋರದೆ ಸಾರ್ವಜನಿಕರು ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ ನೀಡಿದರು.

ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ಮಲೇರಿಯಾ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು ಜ್ವರದ ಬಗ್ಗೆ ಉದಾಸೀನತೆ ತೋರಬಾರದು, ತಕ್ಷಣ ಆಸ್ಪತ್ರೆಗಳಿಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಲೇರಿಯಾ ದೃಢಪಟ್ಟಲ್ಲಿ ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬೇಕು ಎಂದರು.

ಪ್ರತಿದಿನ ಮಲೇರಿಯಾ ವಿರುದ್ಧ ಹೋರಾಟ ನಡೆಸಬೇಕಿದೆ. ಮಲೇರಿಯಾ ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದರು.

ಸಾರ್ವಜನಿಕರು ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿಬೇಕು, ಸ್ವಚ್ಛತೆ ಕಾಪಾಡಿಕೊಂಡರೆ ಸೊಳ್ಳೆಗಳ ಉತ್ಪತ್ತಿ ತಡೆಯಬಹುದು. ಸೊಳ್ಳೆಗಳ ನಿಯಂತ್ರಣಕ್ಕೆ ನೀರು ಶೇಖರಣಾ ತೊಟ್ಟಿಗಳನ್ನು ಮುಚ್ಚಿಡಬೇಕು. ವಾರಕೊಮ್ಮೆ ತೊಟ್ಟಿಗಳಿಂದ ಸಂಪೂರ್ಣವಾಗಿ ನೀರು ಖಾಲಿ ಮಾಡಿ ಒಣಗಿಸಿ ಮತ್ತೆ ನೀರು ಸಂಗ್ರಹಿಸಿಟ್ಟುಕೊಳ್ಳಬೇಕು. ಸೊಳ್ಳೆಗಳು ಬಾರದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕ ಬಳಸಿದರೆ ರೋಗಗಳಿಂದ ದೂರ ಇರಬಹುದು ಎಂದರು.

ಆರೋಗ್ಯ ಇಲಾಖೆಯಿಂದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೀನು ಸಾಕಾಣಿಕೆ ತೊಟ್ಟಿಗಳನ್ನು ನಿರ್ಮಿಸಿ ಗಪ್ಪಿ ಮತ್ತು ಗ್ಯಾಂಬೋಸಿಯ ಮೀನು ಮರಿಗಳನ್ನು ಬೆಳೆಸಲಾಗುತ್ತಿದ್ದು ಸಮೀಪದ ಕೆರೆ ಕಟ್ಟೆಗಳಿಗೆ ಮೀನು ಮರಿಗಳನ್ನು ಬಿಟ್ಟು ಸೊಳ್ಳೆಗಳ ನಿಯಂತ್ರಣ ಮಾಡಲಾಗುತ್ತಿದೆ. ಮಲೇರಿಯಾ ನಿಯಂತ್ರಣದ ಬಗ್ಗೆ ಗ್ರಾಮ ಪಂಚಾಯಿತಿ, ಮೀನುಗಾರಿಕೆ ಇಲಾಖೆ, ನಗರಾಭಿವೃದ್ಧಿ ಹಾಗೂ ಗಣಿಗಾರಿಕೆ ಇಲಾಖೆಗಳು ಸಮನ್ವಯ ಸಾಧಿಸಿ, ಮಲೇರಿಯ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಚಿದಂಬರ ಮನವಿ ಮಾಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ನಿಯಂತ್ರಣಾಧಿಕಾರಿ ಡಾ.ಸುಂದರೇಶ್ ಮಾತನಾಡಿ, ಮಲೇರಿಯಾ ನಿಯಂತ್ರಣ ಸಮಾಜದ ಜವಾಬ್ದಾರಿ. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಲಾರ್ವ ಸಮೀಕ್ಷೆ ನಡೆಸಿ ಸೊಳ್ಳೆಗಳ ನಿಯಂತ್ರಣ ಮಾಡುತ್ತಿದ್ದು ಪರಿಣಾಮಕಾರಿಯಾಗಿ ನಡೆಯಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕಮಲಾ, ಆರೋಗ್ಯ ನಿರೀಕ್ಷಣಾಧಿಕಾರಿ ಭಾಸ್ಕರ್, ಕೀಟ ಶಾಸ್ತ್ರಜ್ಞೆ ರೇಖಾ, ಕೀಟ ಸಂಗ್ರಹಗಾರರಾದ ರಾಹುಲ್, ಎನ್ವಿಬಿಡಿಸಿಪಿ ಕಚೇರಿಯ ಶಶಿಕುಮಾರ್, ವೇದಾವತಿ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-37-1128070754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.