ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ಪಾವತಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ವನ್ಯಜೀವಿ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಗುರುವಾರ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಮೇಲುಕಾಮನಹಳ್ಳಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

‘ರಾಜ್ಯದಲ್ಲಿ ವನ್ಯಜೀವಿ, ಪ್ರಾದೇಶಿಕ ವಿಭಾಗಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹಂಗಾಮಿ ನೌಕರರು ಕೆಲಸ ಮಾಡುತ್ತಿದ್ದಾರೆ. ಹಲವು ಬೇಡಿಕೆಗಳ ಈಡೇರಿಕೆಗಾಗಿ ಕಳೆದ ನವೆಂಬರ್ನಲ್ಲಿ ಪ್ರತಿಭಟನೆ ನಡೆಸಿದಾಗ, ಈಡೇರಿಸುವ ಭರವಸೆ ನೀಡಿದ್ದ ಸರ್ಕಾರ ಬಳಿಕ ಮಾತು ತಪ್ಪಿದೆ. ಈ ಬಾರಿ ಲಿಖಿತವಾಗಿ ಭರವಸೆ ಸಿಗುವವರೆಗೂ ಮುಷ್ಕರ ಕೈಬಿಡುವುದಿಲ್ಲ’ ಎಂದು ತಿಳಿಸಿದರು.

‘ಅರಣ್ಯ ಸಚಿವರು ಬೇಡಿಕೆ ಈಡೇರಿಸಲು ಸ್ಪಂದಿಸಿದರೂ ಇಲಾಖೆಯ ಹಿರಿಯ ಅಧಿಕಾರಿಗಳು ಅಡ್ಡಗಾಲು ಹಾಕಿದ್ದಾರೆ’ ಎಂದು ಸಂಘದ ಅಧ್ಯಕ್ಷ ಎ.ಎಂ. ನಾಗರಾಜು ದೂರಿದರು.

‘ಮೊದಲು ಕ್ಷೇಮಾಭಿವೃದ್ದಿ ಅಧಿನಿಯಮದಡಿ ಹಂಗಾಮಿ ನೌಕರರಿಗೆ ವೇತನ ಹಾಗೂ ಸೌಲಭ್ಯ ನೀಡಲಾಗುತ್ತಿತ್ತು. 2017ರಲ್ಲಿ ಬದಲಾಯಿಸಿ ಟೆಂಡರ್ ಕರೆದು ಏಜೆನ್ಸಿಗಳಿಂದ ನೌಕರರಿಗೆ ವೇತನ ನೀಡಲಾಗುತ್ತಿದೆ. ಈ ವ್ಯವಸ್ಥೆಯಿಂದ ನಿಯಮಿತವಾಗಿ ವೇತನ ಸಿಗುತ್ತಿಲ್ಲ, ಸೌಲಭ್ಯ ಪಡೆಯುವುದು ಕಷ್ಟವಾಗಿದೆ’ ಎಂದು ತಿಳಿಸಿದರು.

‘ಹಿಂದೆ ಪ್ರತಿಭಟನೆ ನಡೆಸಿದ ನಂತರ ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚನೆ ಮಾಡಿದರೂ ಪ್ರಯೋಜನವಾಗಿಲ್ಲ. ಏ.1 ರಿಂದ ಮುಂದಿನ ಒಂದು ವರ್ಷದ ಗುತ್ತಿಗೆ ಕರಾರಿಗೆ ಇಲಾಖೆ ತಯಾರಿ ಮಾಡಿಕೊಳ್ಳಲಾಗುತ್ತಿದ್ದು ಅಷ್ಟರೊಳಗೆ ನೌಕರರ ಬೇಡಿಕೆಗಳು ಈಡೇರಿಸಬೇಕು. ಬೇಸಿಗೆಯ ಸಂದರ್ಭ ಅರಣ್ಯದೊಳಗೆ ಅನಾಹುತಗಳಾದರೆ ಹಿರಿಯ ಅಧಿಕಾರಿಗಳು ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಸಂಘದ ಉಪಾಧ್ಯಕ್ಷ ಎಸ್.ಎಸ್.ಹರೀಶ್ ತಿಳಿಸಿದ್ದಾರೆ.

ಉತ್ತರಕನ್ನಡ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳ ವನ್ಯಜೀವಿ ವಿಭಾಗಗಳ ಹಂಗಾಮಿ ನೌಕರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-1193682774

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.