ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಹಾವಿನಮೂಲೆ ಬಳಿಯ ಕರಡಿಮುಟ್ಟಿನ ಸಿರೆಹಳ್ಳದಲ್ಲಿ ಬುಧವಾರ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು 10 ಎಕರೆಯಷ್ಟು ಅರಣ್ಯ ಸುಟ್ಟುಹೋಗಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದರು. ಸಂಜೆಯ ಹೊತ್ತಿಗೆ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ಅರಣ್ಯದೊಳಗೆ ಬೆಳೆದಿದ್ದ ಒಣ ಬಿದಿರು ಸಹಿತ ಲಂಟಾನಾ ಸುಟ್ಟು ಹೋಗಿದೆ. ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಬೇಸಿಗೆಯಲ್ಲಿ ಕಾಡು ಒಣಗಿರುವುದರಿಂದ ಹಾಗೂ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಬೆಂಕಿ ತೀವ್ರಗತಿಯಲ್ಲಿ ಹರಡಿದ್ದು ಹಾನಿ ಸಂಭವಿಸಿದೆ. ಹಾವಿನಮೂಲೆ ಗ್ರಾಮದಲ್ಲಿ 100 ಕುಟುಂಬಗಳು ವಾಸವಿದ್ದು ಬೆಂಕಿ ಜಾಗೃತಿ ಕಾರ್ಯಕ್ರಮಗಳ ಮೂಲಕ ತಿಳಿವಳಿಕೆ ನೀಡಿದ್ದರೂ ಕಾಳ್ಗಿಚ್ಚು ಸಂಭವಿಸಿದ್ದು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕೃತ್ಯಕ್ಕೆ ಕಾರಣರಾದವರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಕೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಯಳಂದೂರು ಎಸಿಎಫ್ ಮಹಾಲಕ್ಷ್ಮೀ ಎಂ, ಬೈಲೂರು ವಲಯ ಅರಣ್ಯಾಧಿಕಾರಿ ಎ.ಪ್ರಮೋದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-37-1254088725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.