ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯದ ಲೊಕ್ಕನಹಳ್ಳಿ ಪಶ್ಚಿಯ ಗಸ್ತಿನ ಕಗ್ಗಲಿಬೋರೆಯಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದೆ.

ಬೆಂಕಿಯ ಕೆನ್ನಾಲಗೆಗೆ 25 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿ, ಸಿಬ್ಬಂದಿ ಹಾಗೂ ವಾಚರ್ಗಳನ್ನೊಳಗೊಂಡ 62 ಮಂದಿಯ ತಂಡ ಸ್ಥಳಕ್ಕೆ ತೆರಳಿ ಕಾಳ್ಗಿಚ್ಚು ನಂದಿಸಿದ್ದು ಬೆಂಕಿ ನಿಯಂತ್ರಣದಲ್ಲಿದೆ ಎಂದು ಯಳಂದೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಲಂಟಾನ ಸಹಿತ ಸ್ಥಳೀಯ ಒಣ ಹುಲ್ಲಿನ ಪ್ರಬೇಧಗಳು ಸುಟ್ಟುಹೋಗಿವೆ. ಬೇಸಿಗೆಯಲ್ಲಿ ಉಷ್ಟಾಂಶ ಹೆಚ್ಚಾಗಿ ಅರಣ್ಯದೊಳಗಿರುವ ಹುಲ್ಲು ಲಂಟಾನ ಒಣಗಿ ಸುಲಭವಾಗಿ ಬೆಂಕಿ ಹರಡುವ ಆತಂಕ ಇರುತ್ತದೆ. ಕಾಡಂಚಿನ ಗ್ರಾಮಗಳಲ್ಲಿ ಬೆಂಕಿ ಜಾಗೃತಿ ಕುರಿತು ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದರೂ ಕಾಳ್ಗಿಚ್ಚು ಸಂಭವಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಕೃತ್ಯಕ್ಕೆ ಕಾರಣರಾದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಿಆರ್ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಸ್.ಶ್ರೀಪತಿ, ಯಳಂದೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹಾಲಕ್ಷ್ಮೀ ಎಂ, ಕೊಳ್ಳೇಗಾಲ ವನ್ಯಜಿವಿ ವಲಯದ ವಲಯ ಅರಣ್ಯಾಧಿಕಾರಿ ಬಿ.ಎಸ್.ವಾಸು ಭೇಟಿನೀಡಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-37-1236215748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.