ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳು ಮತ್ತು ಬುಡಕಟ್ಟು ಪ್ರದೇಶಗಳಿಗೆ ವಿದ್ಯುತ್, ಕುಡಿಯುವ ನೀರು ಸಹಿತ ಮೂಲಸೌಕರ್ಯಗಳನ್ನು ಒದಗಿಸುವ ಪ್ರಸ್ತಾವಗಳಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಹಸಿರು ನಿಶಾನೆ ಸಿಕ್ಕಿದೆ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದ್ದಾರೆ.

ಕಾಡಂಚಿನ ಗ್ರಾಮಗಳು ಮತ್ತು ಗಿರಿಜನ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ಮಾರ್ಚ್ 21ರಂದು ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ 90ನೇ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದಾಗಿ ದಶಕಗಳಿಂದ ಕತ್ತಲಲ್ಲಿದ್ದ ಬುಡಕಟ್ಟು ಕುಟುಂಬಗಳ ಮನೆಗಳಿಗೆ ಶೀಘ್ರದಲ್ಲೇ ಬೆಳಕು ಬರಲಿದೆ.

ಹಾಡಿಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿರುವುದು ಸಂತಸ ತಂದಿದೆ ಎಂದು ಸುನೀಲ್ ಬೋಸ್ ತಿಳಿಸಿದ್ದಾರೆ.

ಕುಡಿಯುವ ನೀರಿನ ಸೌಲಭ್ಯಗಳ ಪ್ರಸ್ತಾವಗಳ ಪೈಕಿ ನಳದ ಮೂಲಕ ಕುಡಿಯುವ ನೀರು ಪೂರೈಸುವ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ 88ನೇ ಸಭೆಯಲ್ಲೇ ಅನುಮೋದನೆ ನೀಡಲಾಗಿದೆ. ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಪ್ರಸ್ತಾವಗಳನ್ನು ಮುಂಬರುವ ಸಭೆಯಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ.

ಕಾಡಂಚಿನ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ವನ್ಯಜೀವಿ ಕಾಯ್ದೆಯಡಿ ಕಠಿಣ ನಿಯಮಗಳು ಅಡ್ಡಿಯಾಗಿದ್ದವು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸಮಸ್ಯೆ ಪರಿಹರಿಸಿರುವುದು ಅಭಿನಂದನಾರ್ಹ, ಜಿಲ್ಲೆಯ ಜನತೆಯ ಪರವಾಗಿ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಂಸದ ಸುನೀಲ್ ಬೋಸ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-37-605812717

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.