ಚಾಮರಾಜನಗರ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ಖಾಲಿ ಸಿಲಿಂಡರ್ಗಳನ್ನು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ವಾಣಿಜ್ಯ ಗ್ಯಾಸ್ ದರವನ್ನು 993 ಹೆಚ್ಚಳ ಮಾಡಿರುವುದು ಖಂಡನೀಯ. ಅಗತ್ಯ ವಸ್ತುಗಳ ಬೆಲೆ ಏರಿಕೆಯ ಜೊತೆಗೆ ಸಿಲಿಂಡರ್ ದರವನ್ನು ಹೆಚ್ಚಿಸಿರುವುದು ಹೋಟೆಲ್ ಉದ್ಯಮಕ್ಕೆ ದೊಡ್ಡ ಪೆಟ್ಟುಕೊಟ್ಟಂತಾಗಿದೆ. ಕೂಡಲೇ ಕೇಂದ್ರ ಸರ್ಕಾರ ದರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ಸಿ.ಸೋಮನಾಯಕ, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಚಾ.ವೆಂ.ರಾಜಗೋಪಾಲ್, ಆಟೋ ಲಿಂಗರಾಜು, ಅಮಚವಾಡಿ ರಾಜು, ರಾಚಪ್ಪ, ಮುತ್ತಿಗೆ ಗೋವಿಂದರಾಜು, ಹೊಮ್ಮ ಲೋಕೇಶ್, ಮಂಗಲ ಹೊಸೂರು, ಶಿವಣ್ಣ, ನಂಜುಂಡಿ, ನಾಗರಾಜಶೆಟ್ಟಿ, ನಂಜುಂಡಶೆಟ್ಟಿ, ಆಟೋ ಸುರೇಶ್, ಚಂದ್ರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-37-95833418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.