ಹನೂರು: ರಾಜ್ಯದ ಗಡಿಯಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರ ಮನೆ ಬಾಗಿಲಿಗೆ ಗ್ಯಾಸ್ ವಿತರಣಾ ಏಜೆನ್ಸಿ ಸಮರ್ಪಕವಾಗಿ ಅಡುಗೆ ಅನಿಲ ವಿತರಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

‘ಗ್ರಾಹಕರ ಮನೆ ಬಾಗಿಲಿಗೆ ಅನಿಲ ಸಿಲಿಂಡರ್ ವಿತರಣೆ ಮಾಡಲು ಸ್ಥಳೀಯವಾಗಿ ನಾಗಮ್ಮ ಗ್ಯಾಸ್ ಏಜೆನ್ಸಿಗೆ ಅನುಮತಿ ನೀಡಲಾಗಿತ್ತು. ಆದರೆ, ಏಜೆನ್ಸಿ ಮಾಲೀಕರು ಕಾಡಂಚಿನ ಗ್ರಾಮಗಳಿಗೆ ಸಮರ್ಪಕವಾಗಿ ಗ್ಯಾಸ್ಗಳನ್ನು ವಿತರಣೆ ಮಾಡದೆ ರಾಮಪುರ ಗ್ರಾಮದ ತಮ್ಮ ಮನೆಯ ಮುಂದೆ ಗ್ಯಾಸ್ ಸಿಲಿಂಡರ್ಗಳನ್ನು ವಿತರಣೆ ಮಾಡುತ್ತಿದ್ದಾರೆ, ಇದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ಮೀಣ್ಯಂ ಗ್ರಾಮದಲ್ಲಿ ಗ್ಯಾಸ್ ಏಜೆನ್ಸಿ ಆರಂಭವಾದಾಗ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದರು. ಆದರೆ, ಕೆಲವೇ ತಿಂಗಳಲ್ಲಿ ಏಜೆನ್ಸಿ ಕಚೇರಿಯನ್ನು ರಾಮಪುರಕ್ಕೆ ವರ್ಗಾಯಿಸಿತು. ಈ ನಡೆಯನ್ನು ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಮೀಣ್ಯಂ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಗ್ಯಾಸ್ನ ಬಿಲ್ ತೆಗೆಯಲು ಆಗುತ್ತಿಲ್ಲ, ಸ್ವಲ್ಪ ದಿನದ ಮಟ್ಟಿಗೆ ಸಹಕರಿಸಿ ಎಂಬ ಮನವಿಯ ಹಿನ್ನೆಲೆಯಲ್ಲಿ ಗ್ರಾಹಕರು ಒಪ್ಪಿಕೊಂಡಿದ್ದರು.

ಆದರೆ, ಇದೇ ಸಮಸ್ಯೆಯನ್ನು ಈಗಲೂ ಮುಂದಿಟ್ಟುಕೊಂಡು ಗ್ಯಾಸ್ ಏಜೆನ್ಸಿಯು ಗ್ರಾಹಕರ ಮನೆಗಳಿಗೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡದೆ ಸುರಕ್ಷತಾ ಕ್ರಮಗಳನ್ನೂ ಪಾಲಿಸದೆ ರಾಮಾಪುರದಲ್ಲಿರುವ ತಮ್ಮ ಮನೆಯ ಮುಂದೆ ಶೇಖರಣೆ ಮಾಡಿಟ್ಟುಕೊಂಡು ಗ್ರಾಹಕರಿಗೆ ವಿತರಿಸುತ್ತಿದ್ದಾರೆ ಎಂದು ನಾಗರಿಕರು ದೂರಿದ್ದಾರೆ.

ಈ ಸಂಬಂಧ ಆಹಾರ ಮತ್ತು ಸರಬರಾಜು ಸರಬರಾಜು ಇಲಾಖೆಯ ಉಪ ನಿರ್ದೇಶಕರು, ಹನೂರು ತಹಶೀಲ್ದಾರ್, ತಾಲ್ಲೂಕು ಆಹಾರ ನಿರೀಕ್ಷಕರಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ನಿಯಮ ಉಲ್ಲಂಘನೆ ವಿರುದ್ಧ ಪ್ರಕರಣವೂ ದಾಖಲಾಗಿಲ್ಲ. ಮನೆ ಮುಂದೆ ಕಾನೂನು ಬಾಹಿರವಾಗಿ ಗ್ಯಾಸ್ ಸಿಲಿಂಡರ್ಗಳನ್ನು ಶೇಖರಣೆ ಮಾಡಿಟ್ಟುಕೊಂಡು ವಿತರಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆಯೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಗ್ಯಾಸ್ ಏಜೆನ್ಸಿ ಮಾಲೀಕರು ಅನುಮತಿ ಪಡೆದ ಸ್ಥಳದಲ್ಲಿಯೇ ಗ್ಯಾಸ್ ವಿತರಣೆ ಮಾಡಬೇಕು. ಒಂದೊಮ್ಮೆ ಸುರಕ್ಷತಾ ಕ್ರಮಗಳನ್ನು ಅನುಸರಿಸದಿದ್ದರೆ ಏಜೆನ್ಸಿ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕಿ ವಸುಂಧರಾ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-37-1553983469

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.