ಚಾಮರಾಜನಗರ: ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರೊಂದಿಗೆ ಪೋಷಕರು ಸಹಕರಿಸಬೇಕು, ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ನಿವೃತ್ತ ಬಿಇಒ ಸೋಮಣ್ಣೇಗೌಡ ಅಭಿಪ್ರಾಯಪಟ್ಟರು.

ಮಲ್ಲಯ್ಯನಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ದಾಖಲಾತಿ ಆಂದೋಲನ, ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತವಾಗಿ ಪಠ್ಯ–ಪುಸ್ತಕ, ಸಮವಸ್ತ್ರ, ಬಿಸಿಯೂಟ ಸಹಿತ ಪೌಷ್ಟಿಕಾಂಶ ಆಹಾರ ನೀಡಲಾಗುತ್ತದೆ. ಆದರೂ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿರುವುದು ಬೇಸರದ ವಿಚಾರ ಎಂದರು.

ಸರ್ಕಾರಿ ಶಾಲೆಗಳನ್ನು ಉಳಿಸಲು ಪೋಷಕರು, ಗ್ರಾಮಸ್ಥರು, ಶಿಕ್ಷಕರು ಒಂದಾಗಬೇಕು, ವಿದ್ಯಾರ್ಥಿಗಳು ಅಂಬೇಡ್ಕರ್ ಅವರನ್ನು ಆದರ್ಶವಾಗಿರಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳಿಗೆ ನೋಟ್ಬುಕ್, ಪೆನ್, ಬ್ಯಾಗ್ಗಳನ್ನು ಧರ್ಮರಾಜು ನೀಡಿದರು. ರಂಗದೀವಿಗೆ ಸಂಸ್ಥೆಯ ಅಧ್ಯಕ್ಷ ಕಲೆ ನಟರಾಜ್, ಶಶಿಕಲಾ, ಎಸ್ಡಿ ಎಂಸಿ ಸದಸ್ಯ ದುಂಡೇಗೌಡ ಉಪಸ್ಥಿತರಿದ್ದರು, ಶಿಕ್ಷಕಿ ಶಿಲ್ಪಾ ಪ್ರಾರ್ಥಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-1996673113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.