ಚಾಮರಾಜನಗರ: 1993ರ ಪಂಚಾಯತ್ ರಾಜ್ ಕಾಯ್ದೆಯು ಗ್ರಾಮ ಪಂಚಾಯಿತಿಗಳಿಗೆ ಸಂವಿಧಾನಾತ್ಮಕ ಸ್ಥಾನಮಾನ ನೀಡಿ ಬಲಗೊಳಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾರೋತ್ ತಿಳಿಸಿದರು.

ಪಂಚಾಯತ್ ರಾಜ್ ಸಂಸ್ಥೆಗಳು ಸಾಧಿಸಿರುವ ಗಮನಾರ್ಹ ಪ್ರಗತಿ ಮತ್ತು ಸಾಮರ್ಥ್ಯವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರ ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಮೈಲುಗಲ್ಲಾಗಿರುವ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಂವಿಧಾನದ 73ನೇ ತಿದ್ದುಪಡಿ ಮೂಲಕ ಜಾರಿಗೊಳಿಸಿ ಸ್ಥಳೀಯ ಆಡಳಿತವನ್ನು ಭದ್ರಗೊಳಿಸಲಾಗಿದೆ. ಪಂಚಾಯತ್ ರಾಜ್ ಸಂಸ್ಥೆಗಳು ದೇಶದ ಪ್ರಗತಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಸ್ಥಳೀಯವಾಗಿ ತೆರಿಗೆ ವಸೂಲಾತಿ, ಗ್ರಾಮೀಣ ನೈರ್ಮಲ್ಯ, ಮಹಿಳಾ ಸ್ವಾವಲಂಬನೆ, ಕೃಷಿ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಉದ್ಯೋಗ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಸಹಿತ ಹಲವು ಆಯಾಮಗಳಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಬಹುಮುಖ್ಯವಾಗಿದೆ ಎಂದರು.

ಗ್ರಾಮಗಳ ಅಭಿವೃದ್ಧಿಯಲ್ಲಿ ಪಂಚಾಯಿತಿಗಳ ಮಹತ್ವ ಹೆಚ್ಚಾಗಿರುವುದರಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದವುಗಳನ್ನು ಗುರುತಿಸಿ ಅಭಿನಂದಿಸುವ ಮೂಲಕ ಅವುಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಪ್ರೇರೇಪಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಹೇಳಿದರು. ತೆರಿಗೆ ವಸೂಲಾತಿಯಲ್ಲಿ ಯಳಂದೂರು ತಾಲ್ಲೂಕು ಶೇ 91 ಪ್ರಗತಿ ಸಾಧಿಸಿದ್ದು, ಚಾಮರಾಜನಗರ ತಾಲ್ಲೂಕಿನ ಸಾಗಡೆ, ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ, ಹನೂರು ತಾಲ್ಲೂಕಿನ ಗೋಪಿನಾಥಂ, ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ, ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಗ್ರಾಮ ಪಂಚಾಯಿತಿಗಳ ಅರಿವು ಕೇಂದ್ರಗಳನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ ಜ್ಯೋತಿಗೌಡನಪುರ, ಹಂಗಳ, ಸೂಳೇರಿಪಾಳ್ಯ, ದೊಡ್ಡಿಂದುವಾಡಿ, ಕೆಸ್ತೂರು ಹಾಗೂ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿಯಾಗಿರುವ ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಗ್ರಾಮಪಂಚಾಯಿತಿ ಮತ್ತು ‘ಸಂತಸಮಯ ವೃದ್ಧಾಪ್ಯ’ ಕಾರ್ಯಕ್ರಮದಡಿ ಹಿರಿಯ ನಾಗರೀಕರ ಸ್ವಾಸ್ಥ್ಯ, ಕಲ್ಯಾಣ ಕುರಿತ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿರುವ ಸತ್ಯ ಎಜುಕೇರ್ ಕಾಂಪಿಟೆನ್ಸಿ ಟ್ರಸ್ಟ್ ಸಂಸ್ಥೆಯನ್ನು ಅಭಿನಂದಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಸಿ.ಶೃತಿ, ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-37-473351741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.