ಚಾಮರಾಜನಗರ: ‘ರಾಜ್ಯದಲ್ಲಿ ಮುಂಗಾರು ಮಳೆಯ ಅಭಾವ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತವಾಗಿರುವುದು ರೈತರ ಪಾಲಿಗೆ ಸಂಕಷ್ಟ ತಂದೊಡ್ಡಿದೆ. ಸಮಸ್ಯೆಗಳಿಗೆ ಕೃಷಿ ಇಲಾಖೆ ತುರ್ತು ಸ್ಪಂದಿಸಬೇಕು’ ಎಂದು ಒತ್ತಾಯಿಸಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕೃಷಿ ಇಲಾಖೆಯ ಉಪನಿರ್ದೇಶಕಿ ಸುಷ್ಮಾ ಅವರಿಗೆ ಮನವಿ ಸಲ್ಲಿಸಲಾಯಿತು.

ಮುಂಗಾರು ಮಳೆಯ ಕೊರತೆಯ ದುಷ್ಪರಿಣಾಮಗಳನ್ನು ಎದುರಿಸಲು ಕೃಷಿ ಇಲಾಖೆ ಸನ್ನದ್ಧವಾಗಿರಬೇಕು, ಮಳೆಯ ಅನಿಶ್ಚಿತತೆಯ ಲಾಭ ಪಡೆದುರೈತರನ್ನು ಲೂಟಿ ಮಾಡಲು ಕಾಳಸಂತೆಕೋರರಿಗೆ ಅವಕಾಶ ನೀಡಬಾರದು. ಮುಂಗಾರು ಅವಧಿಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಬೇಕು. ಅಗತ್ಯ ಪ್ರಮಾಣದ ಬೀಜ, ರಸಗೊಬ್ಬರ ದಾಸ್ತಾನು ಇರಿಸಿಕೊಳ್ಳಬೇಕು. ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ಮಾರುಕಟ್ಟೆಯಲ್ಲಿ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿ ಯಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ತಾಲ್ಲೂಕು ಮಟ್ಟದಲ್ಲಿ ಮೇವು ಬ್ಯಾಂಕ್ ತೆರೆದು ಸಕ್ರಿಯಗೊಳಿಸಬೇಕು. ಮೇವಿನ ಕೊರತೆ ಹಾಗೂ ಕುಡಿಯುವ ನೀರಿನ ಅಲಭ್ಯತೆಯಿಂದಾಗಿ ರೈತರು ಜಾನುವಾರುಗಳನ್ನು ಕಸಾಯಿ ಖಾನೆಗಳಿಗೆ ಮಾರಾಟಮಾಡುವಂತಹ ಸ್ಥಿತಿ ನಿರ್ಮಾಣವಾಗದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದರು.

ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಇಳುವರಿ ಕುಂಟಿತ ಸಾಧ್ಯತೆ ಇದ್ದು ಸರ್ಕಾರ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ನೀಡುವ ಕ್ರಿಯಾ ಯೋಜನೆ ರೂಪಿಸಿ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಮಳೆ ಅಭಾವದಿಂದ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ರೈತರಿಗೆ ತೊಂದರೆಯಾದರೆ ಬಿಜೆಬಿ ರೈತ ಮೋರ್ಚಾವತಿಯಿಂದ ಜಿಲ್ಲೆಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಮುಖಂಡರು ಎಚ್ಚರಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಳೆ ವಿಳಂಬವಾಗಿದ್ದು ರೈತಾಪಿ ವರ್ಗ ಕಂಗಾಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಶಾಸಕರಿಗಾಗಲಿ ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ, ಬರ ಎದುರಿಸಲು ತಯಾರಿಮಾಡಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಎಸ್.ಬಸವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಮಲ್ಲಿಕಾರ್ಜುನಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಕಾಡಹಳ್ಳಿ ಕುಮಾರ್, ಚಂದ್ರಶೇಖರ್, ಪುರುಷೋತ್ತಮ, ಎಂ.ಮಹದೇವಸ್ವಾಮಿ, ಚಂದ್ರಶೇಖರಪ್ಪ, ಬಸವಣ್ಣ, ಕಾರ್ಯದರ್ಶಿ ಮಹೇಶ್ ಮರಿಯಾಲ, ರಮೇಶ್, ಸಿದ್ದರಾಜು, ಅಗರರಾಜು, ಶ್ರೀಕಂಠಪ್ಪ, ರಾಮಣ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-37-193465971

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.