ಚಾಮರಾಜನಗರ: ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯುತ್ತಿದ್ದ ಕುಟುಂಬದ ಯಜಮಾನಿ ಮೃತಪಟ್ಟರೆ ಕೂಡಲೇ ಅವರ ಕುಟುಂಬದ ಅರ್ಹ ಮಹಿಳಾ ಫಲಾನುಭವಿಗೆ ಗೃಹಲಕ್ಷ್ಮಿ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಳೆ ಮೃತಪಟ್ಟರೆ ಅವರ ಕುಟುಂಬ ಸದಸ್ಯರಿಗೆ ಯೋಜನೆಯ ಲಾಭ ದೊರೆಯಬೇಕು. ಅಂಗನವಾಡಿ ಕಾರ್ಯಕರ್ತೆಯರು ಅಥವಾ ಸ್ಥಳೀಯ ಅಧಿಕಾರಿಗಳು ಮಾಹಿತಿ ಪಡೆದು ಕುಟುಂಬದ ಮತ್ತೋರ್ವ ಮಹಿಳಾ ಫಲಾನುಭವಿಗೆ ಸೌಲಭ್ಯ ತಲುಪಿಸಬೇಕು. ಇದರಿಂದ ಕುಟುಂಬಕ್ಕೆ ಆರ್ಥಿಕವಾಗಿ ಶಕ್ತಿ ಬರಲಿದೆ ಎಂದರು.

ಗೃಹಲಕ್ಷ್ಮಿ ಯೋಜನೆ ಪಡೆಯಲು ಹೊಸದಾಗಿ ಅರ್ಜಿ ಹಾಕಿದವರಿಗೆ ವಿಳಂಬ ಮಾಡದೆ ಸೌಲಭ್ಯ ತಲುಪಿಸಲು ಕ್ರಮ ತೆಗೆದುಕೊಳ್ಳಬೇಕು. ಅರ್ಜಿದಾರರು ಸೌಲಭ್ಯ ಪಡೆಯಲು ಕಚೇರಿಗಳಿಗೆ ಅಲೆಯುವಂತಾಗಬಾರದು, ಅರ್ಹರೆಲ್ಲರಿಗೂ ಯೋಜನೆಯ ಲಾಭ ಸಿಗಬೇಕು ಎಂದು ಸಲಹೆ ನೀಡಿದರು.

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಅಗತ್ಯ ಸಂಖ್ಯೆಯ ಬಸ್ಗಳನ್ನು ಓಡಿಸಬೇಕು. ಜೂನ್ 1ರಿಂದ ಶಾಲೆಗಳು ಪ್ರಾರಂಭವಾಗುವುದರಿಂದ ಶಾಲಾ ಸಮಯದಲ್ಲಿ ಬಸ್ಗಳ ಅಲಭ್ಯತೆಯಾಗದಂತೆ ಎಚ್ಚರವಹಿಸಬೇಕು, ಶಾಲೆ ಆರಂಭವಾಗುವ ಹಾಗೂ ಬಿಡುವ ಸಮಯದಲ್ಲಿ ಹೆಚ್ಚಿನ ಬಸ್ಗಳನ್ನು ಓಡಿಸಬೇಕು. ವಿಶೇಷವಾಗಿ ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನ ಸ್ವಾಮಿ ಬೆಟ್ಟದ ಭಾಗಗಳಿಗೆ ಆದ್ಯತೆ ಮೇರೆಗೆ ಸುಸಜ್ಜಿತವಾದ ಬಸ್ಗಳನ್ನು ನಿಯೋಜಿಸಬೇಕು ಎಂದು ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದರೆ ಪರ್ಯಾಯ ವ್ಯವಸ್ಥೆ ಮೂಲಕ ನಿಗದಿತ ಅವಧಿಯೊಳಗೆ ಪಡಿತರ ನೀಡಬೇಕು, ಗೋದಾಮುಗಳಲ್ಲಿ ಗುಣಮಟ್ಟವಿಲ್ಲದ ಪಡಿತರ ಧಾನ್ಯ ಕಂಡುಬಂದರೆ ವಾಪಸ್ ಪಡೆದು ಗುಣಮಟ್ಟದ ಆಹಾರ ಧಾನ್ಯ ವಿತರಿಸಬೇಕು, ಪಡಿತರ ವಿತರಣೆಯಲ್ಲಿ ಲೋಪಗಳಿಗೆ ಅವಕಾಶ ನೀಡಬಾರದು ಎಂದರು.

ಗೃಹಜ್ಯೋತಿ ಯೋಜನೆಯಡಿ ಸೌಲಭ್ಯಗಳು ಸಮರ್ಪವಾಗಿ ತಲುಪಿಸಬೇಕು, ಮಳೆಗಾಲವಾದ್ದರಿಂದ ಟ್ರಾನ್ಸ್ಫಾರ್ಮ್ಗಳು ದುರಸ್ಥಿಗೆ ಬಂದರೆ ಕೂಡಲೇ ಸರಿಪಡಿಸಿ ವಿದ್ಯುತ್ ಸಂಪರ್ಕ ನೀಡಬೇಕು, ಯುವನಿಧಿ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು, ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ರವಿ, ಎನ್, ಸಿದ್ದರಾಜು, ಸದಸ್ಯರಾದ ಆರ್. ರಾಜೇಂದ್ರ, ಕೆ.ಬಿ.ಚಿನ್ನಸ್ವಾಮಿ, ಎಚ್.ಜಿ. ಉಮಾಪತಿ, ಎಂ. ರಾಚಯ್ಯ, ಎಚ್.ಎನ್. ಜಯರಾಜು, ಭಾಗ್ಯಾ ಎಂ. ದೇವರಾಜು, ಪ್ರಭು ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕಿ ವಸುಂಧರಾ ಹೆಗಡೆ, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-980893348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.