ಚಾಮರಾಜನಗರ: ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಅರ್ಹರು ಹೊರಗುಳಿಯದಂತೆ ಎಚ್ಚರವಹಿಸಬೇಕು, ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಅಧಿಕಾರಿಗಳು ಹಾಗೂ ಅನುಷ್ಠಾನ ಸಮಿತಿ ಪರಿಶೀಲಿಸಬೇಕು. ಅರ್ಹರು ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು’ ಎಂದರು.

‘ಪ್ರತಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಂಡಿರುವ ಬಗ್ಗೆ ಪರಿಶೀಲಿಸಬೇಕು. ಎಷ್ಟು ಮಂದಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರೆಯುತ್ತಿದೆ, ದೊರೆಯಬೇಕಿದೆ ಎಂಬುದನ್ನು ಪಟ್ಟಿಮಾಡಬೇಕು. ತೊಡಕುಗಳಿದ್ದಲ್ಲಿ ಕೂಡಲೇ ಪರಿಹರಿಸಬೇಕು’ ಎಂದು ಪುಷ್ಪಾ ಅಮರನಾಥ್ ತಿಳಿಸಿದರು.

‘ಗೃಹಲಕ್ಷ್ಮಿ’ ಯೋಜನೆ ಪಡೆಯುತ್ತಿರುವ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದರೆ ಕುಟುಂಬದ ಇತರೆ ಮುಖ್ಯಸ್ಥರ ಹೆಸರನ್ನು ಫಲಾನುಭವಿಯಾಗಿಸಿ ಪ್ರಸ್ತಾವ ಸಲ್ಲಿಸಿ ಕುಟುಂಬಕ್ಕೆ ‘ಗೃಹಲಕ್ಷ್ಮಿ’ ಸೌಲಭ್ಯ ತ್ವರಿತವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರದೀಪ್, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಎಚ್.ಆರ್.ಸುರೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-37-1294628015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.