ಗುಂಡ್ಲುಪೇಟೆ: ಮಡಹಳ್ಳಿ ಗ್ರಾಮದ ಸ್ಥಗಿತಗೊಂಡ ಕ್ವಾರಿಯಲ್ಲಿ ಈಜಲು ಹೋಗಿದ್ದ ವೇಳೆ ಮೃತಪಟ್ಟ ಯುವಕ ನಿಶಾಂತ್ ಕುಟುಂಬಕ್ಕೆ ಪರಿಹಾರ ನೀಡಬೇಕು, ಕ್ವಾರಿ ಮಾಲೀಕರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ‘ರೈತ ಸಾರ್ವಜನಿಕ ಹಕ್ಕು ರಕ್ಷಣಾ ಮತ್ತು ಹೋರಾಟ ವೇದಿಕೆ’ಯಿಂದ ಚಾಮರಾಜನಗರ ಹಿರಿಯ ಭೂ ವಿಜ್ಞಾನಿ ರಾಜೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ವೇದಿಕೆ ಜಿಲ್ಲಾಧ್ಯಕ್ಷ ನಾಗೇಂದ್ರ.ಎಂ ಮಾತನಾಡಿ, ‘ಏ.28ರಂದು ತಾಲ್ಲೂಕಿನ ಮಡಹಳ್ಳಿ ಗ್ರಾಮದ ಗುಡ್ಡ ಕುಸಿತದಿಂದ ಸ್ಥಗಿತಗೊಂಡಿರುವ ಕ್ವಾರಿಯಲ್ಲಿ ನಿಶಾಂತ್ ಈಜಲು ಹೋಗಿ ಸಾವನ್ನಪ್ಪಿದ್ದು, ಇಲ್ಲಿ ಕ್ವಾರಿ ಸ್ಥಗಿತಗೊಂಡ ನಂತರವೂ ಸಾರ್ವಜನಿಕರ ಪ್ರವೇಶ ತಡೆಯಲು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಕ್ವಾರಿ ಪ್ರದೇಶದ ಸುತ್ತ ಬೇಲಿ ನಿರ್ಮಿಸದೆ, ಎಚ್ಚರಿಕೆ ಫಲಕಗಳನ್ನು ಅಳವಡಿಸದೆ, ಅಪಾಯಕರ ಪ್ರದೇಶವೆಂದು ಘೋಷಿಸಿಲ್ಲ. ರಕ್ಷಣಾತ್ಮಕ ವ್ಯವಸ್ಥೆಗಳನ್ನು ಜಾರಿಗೊಳಿಸದೆ ಅಧಿಕಾರಿಗಳು ಮತ್ತು ಕ್ವಾರಿ ಮಾಲೀಕರು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಯುವಕನ ಜೀವಹಾನಿಗೆ ಅವರೇ ನೇರ ಕಾರಣ’ ಎಂದು ದೂರಿದರು.

‘ಕ್ವಾರಿ ಪ್ರದೇಶದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದ್ದರೂ ಕ್ವಾರಿ ಲೀಸ್ ಪಡೆವರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಕಾನೂನು ಬದ್ಧ ಕರ್ತವ್ಯವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ನಿರ್ಲಕ್ಷ್ಯ ಹಾಗೂ ಕರ್ತವ್ಯಲೋಪವಾಗಿದ್ದು, ಮಾನವ ಹತ್ಯೆಗೆ ಸಮಾನವಾಗಿದೆ. ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಕ್ವಾರಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸುವ ಕ್ರಮಗಳನ್ನು ಜಾರಿಗೊಳಿಸಬೇಕು. ಸ್ಥಗಿತಗೊಂಡ ಹಾಗೂ ತ್ಯಜಿಸಲ್ಪಟ್ಟ ಕ್ವಾರಿಗಳ ಸುರಕ್ಷತಾ ಪರಿಶೀಲನೆ ನಡೆಸಿ ಜವಾಬ್ದಾರಿಯುತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಹಿರಿಯ ಭೂ ವಿಜ್ಞಾನಿ ರಾಜೇಶ್ ಪ್ರತಿಕ್ರಿಯೆ ನೀಡಿ, ‘ಮೃತ ನಿಶಾಂತ್ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ಲೀಸ್ ಪಡೆದಿದ್ದ ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಿ, ಅವರಿಂದಲೂ ಪರಿಹಾರ ನೀಡುವಂತೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು. ರಾಜ್ಯ ಕುರುಬರ ಸಂಘದ ತಾಲೂಕು ಅಧ್ಯಕ್ಷ ಸಂದೀಪ್ ಕುಮಾರ್, ಮುಖಂಡ ಕಾರ್ತಿಕ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-37-598617090

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.