ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡ್ಲುಪೇಟೆ | ಕಸಾಯಿ ಖಾನೆಗೆ ಜಾನುವಾರು ಸಾಗಾಣಿ: ಬಂಧನ

Published 10 ಜೂನ್ 2024, 14:34 IST
Last Updated 10 ಜೂನ್ 2024, 14:34 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಸಂತೆಯಿಂದ ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿಸಿರುವ ಘಟನೆ ತಾಲ್ಲೂಕಿನ ಕಮರಹಳ್ಳಿ ರಸ್ತೆಯಲ್ಲಿ ಸೋಮವಾರ ನಡೆದಿದೆ.

ಗುಂಡ್ಲುಪೇಟೆ ಪಟ್ಟಣದ ಗೂಡ್ಸ್ ಆಟೋ ಚಾಲಕ ಅಬ್ದುಲ್ ಜಬ್ಬಾರ್ ಬಂಧಿತ ಆರೋಪಿ. ಉಳಿದ ಇರ್ಷಾದ್ ಹಾಗೂ ಜಾಕೀರ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ವಿವರ: ಬೇಗೂರು ಸಂತೆಯಿಂದ ಕಮರಹಳ್ಳಿ ಮಾರ್ಗವಾಗಿ ಐದು ಜಾನುವಾರುಗಳನ್ನು ಕಸಾಯಿ ಖಾನೆಗೆ ಅಕ್ರಮವಾಗಿ ಗೂಡ್ಸ್ ಆಟೋದಲ್ಲಿ ಸಾಗನೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೇಗೂರು ಸಬ್ ಇನ್ಸ್ ಪೆಕ್ಟರ್ ಚರಣ್ ಗೌಡ ನೇತೃತ್ವದ ತಂಡ ದಾಳಿ ನಡೆಸಿ, ಆಟೋ ಸಮೇತ ಜಾನುವಾರುಗಳನ್ನು ಹಿಡಿದಿದ್ದಾರೆ. ಈ ವೇಳೆ ಚಾಲಕ ಅಬ್ದುಲ್ ಜಬ್ಬಾರ್ ಸಿಕ್ಕಿಬಿದ್ದಿದ್ದು, ಇರ್ಷಾದ್ ಹಾಗೂ ಜಾಕೀರ್ ಇಬ್ಬರು ಪರಾರಿಯಾಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೇಗೂರು ಠಾಣೆ ಪೊಲೀಸರು ಜಾನುವಾರುಗಳನ್ನು ಬರಗಿ ಗೋಶಾಲೆಗೆ ರವಾನಿಸಿದ್ದಾರೆ. ಜೊತೆಗೆ ಪರಾರಿಯಾದ ಇಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT