ಹನೂರು: ‘ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚೆಕ್ ಡ್ಯಾಂಗಳ ಹೂಳು ತೆಗೆದು ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಒಂದು ವಾರದೊಳಗೆ ಅಗತ್ಯ ಕ್ರಮ ವಹಿಸಬೇಕು, ಇಲ್ಲದಿದ್ದರೆ ನಾವೇ ನಮ್ಮ ಸ್ವಂತ ಹಣದಿಂದ ಹೂಳು ತೆಗೆಸಿಕೊಳ್ಳುತ್ತೇವೆ’ ಎಂದು ಬಿಜೆಪಿ ಯುವ ಮುಖಂಡ ನಿಶಾಂತ್ ತಿಳಿಸಿದರು.

ತಾಲ್ಲೂಕಿನ ಮಾರ್ಟಳ್ಳಿಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ತಾಲ್ಲೂಕು ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಮಳೆಯಾಗದೆ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಹನಿ ನೀರಿಗೂ ತೊಂದರೆಯಾಗಿದೆ. ಅದರಲ್ಲೂ ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿಯಾಗಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನವರಿ ತಿಂಗಳಲ್ಲಿಯೇ ಕುಡಿಯುವ ನೀರಿಗೆ ತೊಂದರೆಯಾಗಿದೆ. ಈ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸಿದರೆ ಮಾತ್ರ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ. ಇಲ್ಲದಿದ್ದರೆ ಪ್ರತಿ ವರ್ಷವೂ ತೊಂದರೆ ಅನುಭವಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ಅರಣ್ಯದ ಮಧ್ಯಭಾಗದಲ್ಲಿ ನಿರ್ಮಾಣ ಮಾಡಿರುವ ಚೆಕ್ ಡ್ಯಾಂಗಳಲ್ಲಿ 20 ವರ್ಷಗಳಿಂದ ಹೂಳು ತೆಗೆಯದಿರುವುದರಿಂದ ಸಂಪೂರ್ಣವಾಗಿ ಮುಚ್ಚಿ ಹೋಗಿದ್ದು, ಮಳೆಗಾಲದ ಸಂದರ್ಭ ನೀರು ಸಂಗ್ರಹವಾಗದೆ ತಮಿಳುನಾಡಿಗೆ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದಿರುವುದರಿಂದ ಈ ಭಾಗದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಒಂದು ವಾರದಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಇಲ್ಲದಿದ್ದರೆ ನಾವೇ ಹೂಳು ತೆಗೆದುಕೊಳ್ಳಬೇಕಾಗುತ್ತದೆ’ ಎಂದರು.

‘1998ರಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ದಿ. ಎಚ್.ನಾಗಪ್ಪ ಅವರು ಮಾರ್ಟಳ್ಳಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪಣಕೋಬೆ ಗ್ರಾಮದಲ್ಲಿ ಜಲಾಶಯ ನಿರ್ಮಾಣ ಮಾಡಲು ಕ್ರಮವಹಿಸಿ ಭೂಮಿ ಪೂಜೆ ನೆರವೇರಿಸಿದ್ದರು. ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಸಿ.ಎಂ. ಸಿದ್ದರಾಮಯ್ಯ ಅವರೇ ಅಂದು ಉಪಮುಖ್ಯಮಂತ್ರಿಗಳಾಗಿ ಜಲಾಶಯ ನಿರ್ಮಾಣಕ್ಕೆ ಅನುದಾನ ನೀಡಿದ್ದರು. ಸರ್ಕಾರ ಬದಲಾವಣೆಯಾದ ನಂತರ ಜಲಾಶಯ ಕಾಮಗಾರಿ ಪ್ರಾರಂಭವಾಗದೆ ನನೆಗುದಿಗೆ ಬಿದ್ದಿದೆ. ಸಿದ್ದರಾಮಯ್ಯ ಅವರು ಜಲಾಶಯದ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಈ ಭಾಗಕ್ಕೆ ಅನುಕೂಲವಾಗಲಿದೆ’ ಎಂದರು.

ಮಾರ್ಟಳ್ಳಿ ಗ್ರಾಮ ಘಟಕದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಅರ್ಪುದ ರಾಜ್ ಮಾತನಾಡಿ, ‘ದಂಟಳ್ಳಿ ಮಾರ್ಗವಾಗಿ ಮಾರ್ಟಳ್ಳಿ ಭಾಗಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರು ತುಂಬಿಸಲು ಡಿಪಿಆರ್ ಮಾಡುವಂತೆ 153 ದಿನಗಳು ನಿರಂತರ ಹೋರಾಟ ಮಾಡಲಾಗಿತ್ತು. ಈ ವೇಳೆ ಡಿಪಿಆರ್ ಮಾಡುವುದಾಗಿ ಭರವಸೆ ನೀಡಿದ್ದರಿಂದ ಹೋರಾಟ ಸ್ಥಗಿತ ಮಾಡಲಾಗಿದೆ. ಇದುವರೆಗೂ ಯಾವುದೇ ಪ್ರಕ್ರಿಯೆ ಪ್ರಾರಂಭವಾಗಿಲ್ಲ’ ಎಂದರು.

ಹಿರಿಯ ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಮಾತನಾಡಿ, ‘50 ವರ್ಷಗಳ ಹಿಂದೆ ಮಾರ್ಟಳ್ಳಿ ಭಾಗವು ಮಲೆನಾಡಿನಂತೆ ಕಂಗೊಳಿಸುತ್ತಿತ್ತು. ಆದರೆ ಸಮರ್ಪಕ ಮಳೆಯಾಗದಿರುವುದರಿಂದ ಬರಡು ಭೂಮಿಯಂತೆ ಕಾಣುತ್ತಿದೆ. ಕ್ರೈಸ್ತ ಮಿಷನರಿಯ ಫಾದರ್ಗಳು ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ, ದೂರ ದೃಷ್ಟಿಯ ಮುಂದಾಲೋಚನೆಯಿಂದ ಅವರ ಸಂಸ್ಥೆಗಳಿಂದ ಅನುದಾನ ತಂದು ಚೆಕ್ ಡ್ಯಾಂ ನಿರ್ಮಾಣ ಮಾಡಿದ್ದಾರೆ. ಆದರೆ ಹೂಳು ತೆಗೆಯದೆ ಇರುವುದರಿಂದ ಉಪಯೋಗಕ್ಕೆ ಬರುತ್ತಿಲ್ಲ’ ಎಂದರು.

ರೈತ ಮುಖಂಡರಾದ ಲೂರ್ದು ಸ್ವಾಮಿ, ಮರಿಯಾ ಜೋಸೆಫ್ ಡೇವಿಡ್ ಆರೋಗ್ಯಯಮ್ಮಾಳ್, ಮೇರಿ, ಪುಟ್ಟಸ್ವಾಮಿ ಆರೋಗ್ಯರಾಜ್, ಪೌಲ್ ಧರ್ಮರಾಜ್, ಸೆಲ್ವರಾಜ್, ಸೆಲ್ವಿ ಮೇರಿ, ಪಾತಿ ಮೇರಿ, ಪೀಟರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-37-506478625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.