ಹನೂರು : ಜಮೀನಿನಲ್ಲಿದ್ದ ರೈತರೊಬ್ಬರ ಮೇಲೆ ಸೋಮವಾರ ಕಾಡಾನೆ ದಾಳಿ ಮಾಡಿದ್ದು, ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಅಂಕಪ್ಪ ಸ್ವಾಮಿ (75) ಗಾಯಗೊಂಡ ರೈತ. ಅಂಕಪ್ಪ ಸ್ವಾಮಿ ಅವರ ಜಮೀನಿನಲ್ಲಿ ಬೆಳೆದಿರುವ ಹಲಸಿನ ಹಣ್ಣನ್ನು ಕಾಡಾನೆ ತಿನ್ನಲು ಬಂದಿದೆ. ಈ ವೇಳೆ ರೈತ ಕಾಡಾನೆಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಆದರೆ ಆನೆ ರೈತನ ಮೇಲೆ ದಾಳಿ ಮಾಡಿ ಎತ್ತಿ ಬಿಸಾಡಿದೆ.

ಈ ವೇಳೆ ರೈತನ ಕಾಲು ಹಾಗೂ ಕತ್ತಿನ ಮೂಳೆ ಮುರಿದಿದೆ. ತಕ್ಷಣ ಕುಟುಂಬಸ್ಥರು ಖಾಸಗಿ ವಾಹನದ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ರೈತರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-37-309200438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.