ಹನೂರು: ತಾಲ್ಲೂಕಿನ ಉಡುತೊರೆ ಜಲಾಶಯದ ಹಿನ್ನೀರಿನಲ್ಲಿ ಭಾನುವಾರ ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಮೇಲೆತ್ತಿದರು.

ಮಲೆ ಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿರುವ ಉಡುತೊರೆ ಜಲಾಶಯಕ್ಕೆ ಭಾನುವಾರ ಮುಂಜಾನೆ ಆನೆಗಳು ನೀರು ಕುಡಿಯಲು ಬಂದು ಬಿಸಿಲಿಗೆ ಧಗೆ ತಣಿಸಿಕೊಳ್ಳಲು ಈಜಾಡಲು ಇಳಿದಿವೆ. ಈ ಸಂದರ್ಭ ಹಿನ್ನೀರಿನಲ್ಲಿ ಶೇಖರಣೆಯಾಗಿದ್ದ ಕೆಸರಿನಲ್ಲಿ ಸಿಲುಕಿಕೊಂಡಿವೆ. ಎರಡು ಆನೆ ಪ್ರಯಾಸಪಟ್ಟು ಹೊರಬಂದಿದ್ದು, ಒಂದು ಆನೆ ಕೆಸರಿನಲ್ಲಿ ಸಿಲುಕಿಕೊಂಡಿದು ಹೊರಬರಲು ತೀವ್ರ ಹೋರಾಟ ನಡೆಸಿದೆ.

ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಹನೂರು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ದಿನವಿಡೀ ಕಾರ್ಯಾಚರಣೆ ನಡೆಸಿದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪಶು ವೈದ್ಯಾಧಿಕಾರಿ ನಿತ್ರಾಣಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಿದರು. ಆನೆಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಸರಿನಲ್ಲಿ ಸಿಲುಕಿದ್ದ ಮೂರು ಆನೆಗಳ ಪೈಕಿ ಒಂದು ಆನೆ ನಿತ್ರಾಣಗೊಂಡಿದ್ದು ಚಿಕಿತ್ಸೆ ನೀಡಲಾಗಿದೆ. ಮಹೇಂದ್ರ ಆನೆಯನ್ನು ಕರೆಸಿ ಆನೆಯನ್ನು ಮೇಲೆತ್ತಿ ಕಾಡಿಗೆ ಬಿಡಲಾಗಿದೆ. ಮೂರು ಆನೆಗಳು ಸುರಕ್ಷಿತವಾಗಿವೆ ಎಂದು ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಈ ಸಂದರ್ಭ ಮಲೆ ಮಹದೇಶ್ವರ ವನ್ಯಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್ ಹೊಸೂರು, ವಲಯ ಅರಣ್ಯಾಧಿಕಾರಿ ಜಿತೇಂದ್ರ ಹಾಗೂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-37-682303747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.