ಹನೂರು: ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಮಣಗಳ್ಳಿ ಗ್ರಾಮದಲ್ಲಿ ದೊಡ್ಡಹಳ್ಳಕ್ಕೆ ಗಂಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಮನಗುಡ್ಡ ಕೆರೆಗೆ ಕಾವೇರಿ ನದಿಯಿಂದ ಪೈಪ್ಲೈನ್ ಮೂಲಕ ನೀರು ಹರಿಸಿದ ಪರಿಣಾಮ ಈ ಭಾಗದ ರಾಯರ ದೊಡ್ಡಿ, ಚಿಂಚಳ್ಳಿ, ಮಣಗಳ್ಳಿ ಭಾಗದಲ್ಲಿ ನೀರು ಹರಿಯುತ್ತಿದ್ದು ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಿಸಿಲಿನಿಂದ ತತ್ತರಿಸಿ ಗ್ರಾಮಗಳನ್ನೇ ತೊರೆದಿರುವ ರೈತರು ಮತ್ತೆ ಗ್ರಾಮದತ್ತ ಮುಖ ಮಾಡಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ತಾಲ್ಲೂಕಿನ ವಿವಿಧಡೆ ₹490 ಕೋಟಿ ವೆಚ್ಚದಲ್ಲಿ ಕಾವೇರಿ ನದಿಯಿಂದ ಪೈಪ್ಲೈನ್ ಮೂಲಕ ಜಲಾಶಯಗಳಿಗೆ ನೀರು ತುಂಬಿಸಿ ಅದರಿಂದ ವಿವಿಧ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಎರಡು ಗ್ರಾಮ ಪಂಚಾಯಿತಿಗಳ ದತ್ತು: ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎರಡು ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದು ನೀರಾವರಿ ಯೋಜನೆಗಳಿಂದ ರೈತರು ಬೆಳೆಯುವ ಬೆಳೆಗಳಿಗೆ ಬೆಂಬಲ ಬೆಲೆ ಜೊತೆಗೆ, ಅದಕ್ಕೆ ಬೇಕಾದ ವಿಮೆ ನೀಡುವ ಮೂಲಕ ರೈತರ ಬದುಕು ಹಸನಾಗಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಜೊತೆಗೆ ಯುವಕರ ಬದುಕು ಸಹ ರೂಪಿಸಲು ವಿದ್ಯಾವಂತ ಮಕ್ಕಳಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಗಮನಹರಿಸಬೇಕಾಗಿದೆ ಎಂದು ತಿಳಿಸಿದರು .

ಚಾಮುಲ್ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಶಿವಮಲ್ಲೇಗೌಡ, ರಾಮಣ್ಣ, ಕುಲ್ಲೇಗೌಡ, ಜಯಮಾಲಾ, ಮಾದೇಶ್, ಜೇಸಿಮ್ ಪಾಷ, ತಿರುಪತಿ ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-37-1950415471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.