ಹನೂರು: ತಾಲ್ಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂಟಮಾಲಪುರದ ಕೆರೆ ಸಮೀಪ ವನ್ಯಪ್ರಾಣಿ ದಾಳಿಯಿಂದ ಕುರಿ ಮೃತಪಟ್ಟಿದೆ.

ಗೋವಿಂದ ನಾಯ್ಡು ಅವರಿಗೆ ಸೇರಿದ ಕುರಿಯ ಮೇಲೆ ಹುಲಿ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕುರಿಯನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎಂದು ಪ್ರತ್ಯಕ್ಷದರ್ಶಿ ನಾಗರಾಜು ಹೇಳಿದ್ದಾರೆ.

ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಜ್ಜೆ ಗುರುತು ಪರಿಶೀಲಿಸಿದರು. ದಾಳಿ ಮಾಡಿದ ಪ್ರಾಣಿಯ ಕುರಿತು ಖಚಿತಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಅರಣ್ಯ ಇಲಾಖೆ ಹೆಚ್ಚುವರಿ ನಿಗಾ ವಹಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-1339373551

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.