ಹನೂರು: ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಅಪ್ಪಿಗುಳಿ ಬಳಿಯ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ಮಂಚಪುರ ಗ್ರಾಮದ ಪಳನಿ ಎಂಬುವವರು ಗಾಯಗೊಂಡಿದ್ದಾರೆ.

ಪಳನಿ ಬೆಳಗಿನ ಜಾವ ತಮ್ಮ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ವೇಳೆ ಕಾಡು ಹಂದಿ ಏಕಾಏಕಿ ದಾಳಿ ನಡೆಸಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುವನ್ನು ಹೋಲಿ ಕ್ರಾಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರು. ಚಿಕಿತ್ಸೆಗೆ ಮೈಸೂರು ನಗರದ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು, ರೈತರು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-37-387960354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.