ಚಾಮರಾಜನಗರ: ಡಾ.ಎಚ್.ಸಿ.ಮಹದೇವಪ್ಪ ಅವರ ಜನ್ಮದಿನದ ಪ್ರಯುಕ್ತ ಏ.20ರಂದು ಯಳಂದೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಬುದ್ದ, ಬಸವ, ಅಂಬೇಡ್ಕರ್ ಆದರ್ಶಗಳ ಅನುಷ್ಠಾನ ವಿಚಾರದಲ್ಲಿ ಸಚಿವರು ನೀಡಿರುವ ಕೊಡುಗೆ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ಬಳಗದ ಅಧ್ಯಕ್ಷ ವಿ.ಎನ್.ಮಹದೇವಯ್ಯ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಸಾನ್ನಿಧ್ಯವನ್ನು ಕೊಳ್ಳೇಗಾಲ ಜೇತವನ ಬುದ್ಧವಿಹಾರದ ಬೌದ್ಧ ಬಿಕ್ಕು ಮನೋರಕ್ಕಿತ ಭಂತೆ ಹಾಗೂ ಟಿ.ನರಸೀಪುರ ನಳಂದ ಬುದ್ದ ವಿಹಾರದ ಬೌದ್ಧಬಿಕ್ಕು ಬೋದಿರತ್ನ ಭಂತೆ ವಹಿಸಲಿದ್ದಾರೆ.

ಕಾರಾಪುರ ವಿರಕ್ತಮಠದ ಬಸವರಾಜ ಸ್ವಾಮೀಜಿ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಳ್ಳೇಗಾಲದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಉಪಸ್ಥಿತರಿರುವರು, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಆನಂದ್ ಮುಖ್ಯಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.

ಮಾಜಿ ಶಾಸಕರಾದ ಆರ್.ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚಾಮುಲ್ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಸಾಹಿತಿ ಮಹದೇವ ಶಂಕನಪುರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿವರ ನೀಡಿದರು.

ಮಹದೇವಪ್ಪ ಅವರ ಸಾಧನೆಗಳನ್ನು ಜನತೆಗೆ ತಿಳಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಮಹದೇವಪ್ಪ ಅವರ ಅನುಯಾಯಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಸಾಹಿತಿ ದೊಡ್ಡರಾಯಪೇಟೆ ಸಿದ್ದರಾಜು, ಶಂಭುಲಿಂಗಸ್ವಾಮಿ, ಮರಿಸ್ವಾಮಿ, ಆರ್.ರಘು, ಸಿದ್ದರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-37-674370282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.