ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಸಮೀಪದ ಹೆಬ್ಬಸೂರು ಗ್ರಾಮದಲ್ಲಿರುವ ಶೃಂಗೇರಿ ಶಂಕರ ಮಠದಲ್ಲಿ ಶಾರದಾ ದೇವಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ರಥೋತ್ಸವದ ಅಂಗವಾಗಿ ಶಾರದಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಸುಬ್ರಹ್ಮಣ್ಯ ಹೋಮ, ರಾಮತಾರಕ ಹೋಮ ಮತ್ತು ಶಾರದಾದೇವಿ ವಿಗ್ರಹಕ್ಕೆ ಅಭಿಷೇಕ, ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ಸಹಸ್ರನಾಮ ಅರ್ಚನೆ ನೆರವೇರಿಸಲಾಯಿತು.

ಬಳಿಕ ಬಗೆಬಗೆಯ ಹೂಗಳಿಂದ ಸಿದ್ಧಪಡಿಸಿದ್ದ ತೋರಣಗಳನ್ನು ರಥಕ್ಕೆ ಕಟ್ಟಿ ಅಲಂಕರಿಸಲಾಗಿತ್ತು. ಬೆಳಿಗ್ಗೆ 10.30ಕ್ಕೆ ಶಾರದಾಂಬೆಯ ಉತ್ಸವ ಮೂರ್ತಿಯನ್ನು ರಥದೊಳಗೆ ಪ್ರತಿಷ್ಠಾಪಿಸಿ ಹೆಬ್ಬಸೂರಿನ ಅಗ್ರಹಾರದ ಬೀದಿಯಲ್ಲಿ ಉತ್ಸವ ನಡೆಸಲಾಯಿತು. ಗ್ರಾಮಸ್ಥರು ಭಕ್ತಿಭಾವದಿಂದ ರಥವನ್ನು ಎಳೆದರು.

ರಥ ಸಾಗುವ ಹಾದಿಯುದ್ದಕ್ಕೂ ರಂಗೋಲಿಯ ಚಿತ್ತಾರ ಬಿಡಿಸಲಾಗಿತ್ತು. ಭಕ್ತರಿಗೆ ಮಜ್ಜಿಗೆ ಪಾನಕ ವಿತರಿಸಲಾಯಿತು. ಪ್ರಮುಖ ಬೀದಿಯಲ್ಲಿ ಸಂಚರಿಸಿದ ರಥ ಮಧ್ಯಾಹ್ನ 12.30ಕ್ಕೆ ರಥ ಸ್ವಸ್ಥಾನ ತಲುಪಿತು. ಶಾರದಾಂಬೆ ಉತ್ಸವ ಮೂರ್ತಿಗೆ ಅವಭೃತ ಸ್ನಾನ ಮಾಡಿಸಲಾಯಿತು. ಯಜ್ಞೇಶ್ವರ ಐತಾಳ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು.

ರಥೋತ್ಸವಕ್ಕೆ ನೆರೆಯ ಗ್ರಾಮಗಳಿಂದ ಬಂದಿದ್ದ ಭಕ್ತರು ದೇವಿಗೆ ಪ್ರಾರ್ಥಿಸಿದರು. ಮಹಾಮಂಗಳಾರತಿ ನಡೆದ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಯಿತು. ರಥೋತ್ಸವದಲ್ಲಿ ಗ್ರಾಮಸ್ಥರು, ಮುಖಂಡರು ಭಾಗವಹಿಸಿದ್ದರು.

ಮೈಸೂರು, ಬೆಂಗಳೂರು, ಮಡಿಕೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಹೆಬ್ಬಸೂರು ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಎಚ್.ಎಸ್. ಶ್ರೀಧರ ಪ್ರಸಾದ್, ಬ್ರಾಹ್ಮಿ ಮಹಿಳಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಹೆಬ್ಬಸೂರು ಗ್ರಾಮದಲ್ಲಿ ಶೃಂಗೇರಿ ಮಠದ ಭಾರತಿ ತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಶಾಖಾ ಮಠ ಸ್ಥಾಪಿಸಲಾಗಿದೆ. ಇಲ್ಲಿ ಶಾರದಾ ದೇವಿಗೆ ವಿಶೇಷ ಪೂಜೆ ಸಲ್ಲಿಸುವುದು ಸಂಪ್ರದಾಯವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-310721546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.