ಕೊಳ್ಳೇಗಾಲ: ಅಕ್ರಮ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ರೂಪ ಎಚ್ಚರಿಕೆ ನೀಡಿದರು.

ತಾಲ್ಲೂಕಿನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಅನುಮತಿ ಇಲ್ಲದೆ ಅಕ್ರಮವಾಗಿ 20ಕ್ಕೂ ಹೆಚ್ಚು ಅಕ್ರಮ ರೆಸಾರ್ಟ್ ಹಾಗೂ ಹೋಂ ಸ್ಟೇಗಳನ್ನು ನಿರ್ಮಾಣ ಮಾಡಿದ್ದರು, ಹಾಗಾಗಿ ಅದರ ವಿರುದ್ಧ ಕ್ರಮ ಜರುಗಿಸಿ ಬಂದ್ ಮಾಡಿದ್ದೇವೆ ಎಂದರು.

ನಿಮ್ಮ ತಾಲ್ಲೂಕಿನಲ್ಲಿ ಎಲ್ಲೆಲ್ಲಿ ಇಂತಹ ಅಕ್ರಮ ಹೋಂ ಸ್ಟೇ ಹಾಗೂ ರೆಸಾರ್ಟ್ ಇವೆ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಒಂದು ವೇಳೆ ದಾಖಲೆಗಳು ಇಲ್ಲದೆ ಹಾಗೂ ಸರ್ಕಾರದಿಂದ ಅನುಮತಿ ಪಡೆಯದೆ ರೆಸಾರ್ಟ್ ನಿರ್ಮಾಣವಾಗಿದ್ದರೆ ಕೂಡಲೇ ಅದರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ನಾಳೆಯಿಂದಲೇ ಇದರ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸೂಚನೆ ನೀಡುತ್ತೇವೆ ಅವರು ಪರಿಶೀಲನೆ ನಡೆಸಿ ನಮಗೆ ದಾಖಲೆಗಳನ್ನು ನೀಡುತ್ತಾರೆ. ಕಳೆದ ಎರಡು ಮೂರು ದಿನಗಳ ಹಿಂದೆ ಬೆಂಗಳೂರಿನಿಂದ ನಮ್ಮ ತಾಲ್ಲೂಕಿಗೆ ಬಂದು ಒಂದು ರೆಸಾರ್ಟ್ನಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎಂಬುದಾಗಿ ಪೊಲೀಸರು ನನಗೆ ಮಾಹಿತಿ ನೀಡಿದ್ದರು ಪೊಲೀಸ್ ಇಲಾಖೆಯವರು ಅಂತವರ ವಿರುದ್ಧ ಕ್ರಮ ಕೈಗೊಂಡು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಹಾಗಾಗಿ ಇನ್ನು ಮುಂದೆ ಇಂತಹ ಚಟುವಟಿಕೆಗಳಿಗೆ ಅವಕಾಶ ಇಲ್ಲ. ಹಾಗಾಗಿ ಎಲ್ಲಿ ಅಕ್ರಮ ರೆಸಾರ್ಟ್ ಇವೆ ಎಂಬುದರ ಬಗ್ಗೆ ತಹಶೀಲ್ದಾರ್ ಅವರು ನನಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

ನಗರಸಭೆಯಲ್ಲಿ ಇ–ಸ್ವತ್ತು ಸೇರಿದಂತೆ ಅನೇಕ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂಬ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಪಕ್ಕದಲ್ಲಿ ಇದ್ದ ಪೌರಾಯುಕ್ತೆ ರುದ್ರಮ್ಮ ಶರಣಯ್ಯ ಅವರಿಗೆ ತರಾಟೆ ತೆಗೆದುಕೊಂಡರು, ಇ–ಸ್ವತ್ತು ನೀಡುವುದಕ್ಕೆ ಎಷ್ಟು ದಿನ ಬೇಕು ಹಾಗೂ ಬೇರೆ ಕೆಲಸಗಳು ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು. ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸುವುದು ಬೇಡ. ಸರ್ಕಾರದ ನಿಯಮದ ಪ್ರಕಾರ ಖಾತೆಗೆ ಎಷ್ಟು ದಿನ ಅವಕಾಶವಿದೆಯೋ ಅದರೊಳಗೆ ನೀಡಿ ಹಾಗೂ ಸರಿಯಾದ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಬೇಕು. ಯಾವುದೇ ಕಾರಣಕ್ಕೂ ದೂರುಗಳು ನನ್ನ ಬಳಿ ಬರಬಾರದು ಎಂದು ಸೂಚನೆ ನೀಡಿದರು.

ಚರಂಡಿ ನೀರು ಹರಿಯದ ಸಮಸ್ಯೆ ಆಗುತ್ತಿದೆ ಎಂದು ನಗರದ ನಾಗಪ್ಪ ಬಡಾವಣೆ ನಿವಾಸಿಗಳು ಜಿಲ್ಲಾಧಿಕಾರಿಗೆ ಪತ್ರ ಬರೆದ್ದರಿಂದ, ಅಲ್ಲಿಗೂ ಭೇಟಿ ನೀಡಿ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.

ನಗರದ ಲಿಂಗಣಾಪುರ ಬಡಾವಣೆಯಲ್ಲಿ ರಸ್ತೆ ಕಾಮಗಾರಿ , ಮುಡಿಗುಂಡದ ಐಟಿಐ ಕಾಲೇಜು ಕಟ್ಟಡ ಕಾಮಗಾರಿ ಸೇರಿದಂತೆ ತಾಲ್ಲೂಕಿನ ಅನೇಕ ಕಡೆ ನಿರ್ಮಿತಿ ಕೇಂದ್ರದ ವತಿಯಿಂದ ನಡೆಯುತ್ತಿರುವ ಪ್ರತಿಯೊಂದು ಕಾಮಗಾರಿಗಳನ್ನು ಖುದ್ದು ವೀಕ್ಷಣೆ ಮಾಡಿದರು. ಜೊತೆಗೆ ಕಾಮಗಾರಿಗಳ ಗುಣಮಟ್ಟಗಳನ್ನು ಸಹ ಪರಿಶೀಲನೆ ನಡೆಸಿದರು. ಕಾಮಗಾರಿಗಳು ಬಹಳ ಗುಣಮಟ್ಟದಿಂದ ಇದೆ ಹಾಗಾಗಿ ಹೀಗೆ ಮುಂದುವರಿಸಿ ಎಂದು ಸ್ಥಳದಲ್ಲಿದ್ದ ಎಂಜಿನಿಯರ್ ಪ್ರತಾಪ್ ಅವರಿಗೆ ತಿಳಿಸಿದರು.

ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ಪೌರಾಯುಕ್ತೆ ರುದ್ರಮ್ಮ ಶರಣಯ್ಯ, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಅನೇಕ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-37-1794723837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.