ಚಾಮರಾಜನಗರ: ಪರವಾನಗಿ ಪಡೆಯದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಗರಿಷ್ಠ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರವಾನಗಿ ಇಲ್ಲದೆ ನಿಯಮ ಬಾಹಿರ ತಂಬಾಕು ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ತಂಬಾಕು ನಿಯಂತ್ರಣ ಸಮಿತಿ ಪರಿಣಾಮಕಾರಿಯಾಗಿ ಕಾರ್ಯಾಚರಣೆ ನಡೆಸಬೇಕು. ಪರಿಶೀಲನೆ ವೇಳೆ ನಿಯಮ ಉಲ್ಲಂಘನೆ ಕಂಡುಬಂದರೆ ಹೆಚ್ಚಿನ ದಂಡ ವಿಧಿಸಬೇಕು ಎಂದು ಸೂಚಿಸಿದರು.

ನಗರ, ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲೆ, ಕಾಲೇಜು, ಶೈಕ್ಷಣಿಕ ಸಂಸ್ಥೆಗಳ ಆವರಣದ 100ಮೀ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಇಲ್ಲ. ನಿಗದಿತ ಪ್ರದೇಶದಲ್ಲಿರುವ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಸರ್ವೆ ನಡೆಸಿ ತಂಬಾಕು ಮುಕ್ತ ಗ್ರಾಮ ಕಾರ್ಯಕ್ರಮಕ್ಕೆ ಈಗಾಗಲೇ ಆಯ್ಕೆಮಾಡಿರುವ 68 ಗ್ರಾಮಗಳಲ್ಲಿ ವಿಶೇಷ ಗ್ರಾಮಸಭೆ ಆಯೋಜಿಸಬೇಕು, ಘೋಷಣೆಯ ಮಾನದಂಡಗಳನ್ನು ಅನುಸರಿಸಿ ತಂಬಾಕು ಮುಕ್ತ ಗ್ರಾಮ ಘೋಷಣೆ ಮಾಡಬೇಕು ಎಂದರು.

ತಂಬಾಕು, ಮಾದಕದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ, ಕೋಟ್ಪಾ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಬೇಕು, ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಅನುಸಾರ ತಪಾಸಣೆ, ಪರಿಶೀಲನೆ ಚುರುಕುಗೊಳಿಸಬೇಕು ಎಂದು ತಿಳಿಸಿದರು.

ಕೋಟ್ಪಾ ಕಾಯ್ದೆಯಡಿ ವ್ಯಾಪಕ ದಾಳಿ ನಡೆಸಿ ಹೆಚ್ಚು ದಂಡ ವಸೂಲಿ ಮಾಡಿರುವ ಚಾಮರಾಜನಗರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್ ಹಾಗೂ ಹನೂರು ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರಕಾಶ್ ಅವರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಚಂದ್ರಶೇಖರ್, ಡಾ.ಸುಂದರೇಶ್, ತಾಲ್ಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-37-1782127125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.