ಚಾಮರಾಜನಗರ: ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವ, ಶಿಬಿರಗಳನ್ನು ಆಯೋಜಿಸುವ, ಪಿಎಂ ಜನ್ ಮನ್ ಹಾಗೂ ದರ್ತಿ ಅಬಾ ಜನ್ ಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನ ಯೋಜನೆಯಡಿ ‘ಜನ್ ಭಾಗೀದಾರಿ ಸಬ್ಸೆ-ಡೋರ್ ಸಬ್ಸೆ ಪೆಹಲೆ’ ಅಭಿಯಾನಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಲನೆ ನೀಡಿದರು.

ದರ್ತಿ ಅಬಾ ಯೋಜನೆಗಳ ಮಾಹಿತಿಯನ್ನೊಳಗೊಂಡ ಪೋಸ್ಟರ್ಗಳನ್ನು ಪ್ರದರ್ಶಿಸಿದ ಶಾಸಕರು ಹಾಸ್ಟೆಲ್ ಮಕ್ಕಳಿಗೆ ಜನನ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿ ವಾಸಿಸುವ ಚಾಮರಾಜನಗರ ತಾಲ್ಲೂಕಿನ ಬೇಡಗುಳಿ, ಕಣ್ಣೇಗಾಲ, ಯಾನಗಹಳ್ಳಿ, ಮೇಲ್ ಮಾಳ, ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ, ಸೋಮನಪುರ, ಮದ್ದೂರು, ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟ, ಬಿ.ಕಂದಹಳ್ಳಿ, ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಯೋಜನೆ ವ್ಯಾಪ್ತಿಗೊಳಪಟ್ಟಿದ್ದು ಸರ್ಕಾರಗಳ ಯೋಜನೆಗಳು ತಲುಪಲಿವೆ ಎಂದರು.

ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂದ್ಯಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-37-1747544300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.