ಚಾಮರಾಜನಗರ: ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಗ್ರಾಮದ ಮುಖಂಡರು, ಗ್ರಾಮಸ್ಥರು ವಿಜೃಂಭಣೆಯಿಂದ ಆಚರಿಸಿದರು.

ಗ್ರಾಮದ ಸರ್ಕಲ್ನಲ್ಲಿ ಅಂಬೇಡ್ಕರ್ ಅವರ ಬೃಹತ್ ಕಟೌಟ್ ಅಳವಡಿಸಿ ಪ್ರಮುಖ ಬೀದಿಗಳನ್ನುವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಗ್ರಾಮದ ಯಜಮಾನರು ಹಾಗೂ ಮುಖಂಡರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೇಣ ಬತ್ತಿ ಹಚ್ಚಿ ಪ್ರಾರ್ಥಿಸಿದರು. ಸಂವಿಧಾನ ಪೀಠಿಕೆ ವಾಚನ ಮಾಡಿಲಾಯಿತು.

ಗ್ರಾಮದ ಅಂಬೇಡ್ಕರ್ ಭವನದ ಅವರಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಗ್ರಾಮಸ್ಥರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಯಿತು.

ಗ್ರಾಮದ ಯಜಮಾನರಾದ ಮಹದೇವಯ್ಯ, ಮಹದೇವಸ್ವಾಮಿ, ರಮೇಶಮೂರ್ತಿ, ನಿರಂಜನ್, ರಮೇಶ, ರಾಜೇಶ, ಶಿವಸ್ವಾಮಿ, ಕಾಗಲವಾಡಿ ಚಂದ್ರು, ಪ್ರವೀಣ್, ಮರಿಸ್ವಾಮಿ, ಅಂಬೇಡ್ಕರ್ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-37-1017122400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.