ಸಂತೇಮರಹಳ್ಳಿ: ಸಮೀಪದ ಕಸ್ತೂರು ಗ್ರಾಮದಲ್ಲಿ ಸಿಮೆಂಟ್ ರಸ್ತೆ ಹಾಗೂ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮಕ್ಕೆ ಈಗಾಗಲೇ ₹ 73 ಲಕ್ಷ ಅನುದಾನದಲ್ಲಿ ಮುಖ್ಯ ರಸ್ತೆ ಸೇರಿದಂತೆ ಬಡಾವಣೆಯ ರಸ್ತೆಗಳು ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಉಳಿದಿರುವ ರಸ್ತೆಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ₹ 30 ಲಕ್ಷ ವೆಚ್ಚದಲ್ಲಿ ಸಿಮೆಂಟ್ ರಸ್ತೆ ಹಾಗೂ ಬಾಕ್ಸ್ ಚರಂಡಿ ನಿರ್ಮಿಸಲು ಅನುದಾನ ಬಿಡುಗಡೆಯಾಗಿ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಗ್ರಾಮದ ಉಳಿದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರು ಹಾಗೂ ಎಂಜಿನಿಯರ್ ಸ್ಥಳದಲ್ಲಿದ್ದು, ಗುಣಮಟ್ಟದ ಕಾಮಗಾರಿ ಕಾಪಾಡಿಕೊಳ್ಳಬೇಕು. ಗ್ರಾಮಸ್ಥರು ರಸ್ತೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚಾಮುಲ್ ನಾಮನಿರ್ದೇಶಕ ಕಮರವಾಡಿ ರೇವಣ್ಣ, ಮುಖಂಡರಾದ ಮಹದೇವಪ್ರಸಾದ್, ಗೌಡಿಕೆ ಬಸವಣ್ಣ, ಸ್ಟಾಲೀನ್, ಮಹದೇವೇಗೌಡ, ಉಮ್ಮತ್ತೂರು ಶಿವಣ್ಣ, ಶಶಿ, ಪುನೀತ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-37-638161802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.