ಸಂತೇಮರಹಳ್ಳಿ: ಕುದೇರು ಗ್ರಾಮದಲ್ಲಿ ಬಸವೇಶ್ವರ ಜಯಂತಿಯನ್ನು ಈಚೆಗೆ ಆಚರಿಸಲಾಯಿತು.

ಗ್ರಾಮದ ಬೀದಿಗಳಲ್ಲಿ ಚುಕ್ಕಿ ರಂಗೋಲಿ ಬಿಡಿಸಿ, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬಸವಣ್ಣನವರ ಭಾವ ಚಿತ್ರವನ್ನು ಪಲ್ಲಕ್ಕಿಯಲ್ಲಿ ಇರಿಸಿ ಮೆರವಣಿಗೆ ನಡೆಸಲಾಯಿತು. ಡೊಳ್ಳು ಕುಣಿತ, ವೀರಗಾಸೆ ಹಾಗೂ ವಾದ್ಯ ಮೇಳಗಳು ಮೆರುಗು ನೀಡಿದವು.ಪ್ರಮುಖರಾದ ಸುನೀಲ್ ಮಾತನಾಡಿ, ವಿಶ್ವಗುರು ಬಸವಣ್ಣ ಸಮಾಜದ ಅಸಮಾನತೆಯ ವಿರುದ್ದ ಹೋರಾಡಿದ ಮಹಾ ಪುರುಷ. ಅವರ ವಚನಗಳು ಹಾಗೂ ತತ್ವಗಳನ್ನು ಅರ್ಥ ಮಾಡಿಕೊಂಡು ಸಾಮಾಜಿಕ ಸಮಾನತೆಯ ಸಂದೇಶಗಳನ್ನು ತಿಳಿಸಬೇಕಾಗಿದೆ ಎಂದರು.

ಯಳಂದೂರು: ಅಂಬಳೆ ಗ್ರಾಮದಲ್ಲಿ ನೂತನ ಉಪ್ಪರಿಗೆ ಬಸವೇಶ್ವರ ದೇವಸ್ಥಾನದಲ್ಲಿ ಈಚೆಗೆ ಕಳಸ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಪೂಜೆಗಳು ನಡೆದವು.

ಗಂಗರ ಕಾಲದ ನಿರ್ಮಾಣಗಳಲ್ಲಿ ಒಂದಾಗಿದಗದು, ಶಿಥಲವಾಗಿದ್ದ ರುವ ಬಸವೇಶ್ವರ ದೇವಸ್ಥಾನವನ್ನು ಗ್ರಾಮಸ್ಥರು ಪುನರ್ ನಿರ್ಮಿಸಿ ಲೋಕಾರ್ಪಣೆ ಮಾಡಿದ್ದರು. ಧಾರ್ಮಿಕ ಕಾರ್ಯದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ವಿಶೇಷ ಪೂಜೆ, ಭಕ್ತರ ದರ್ಶನ ನಡೆಯಿತು.

ವಿಶೇಷ ವಿನ್ಯಾಸದಲ್ಲಿ ನಿರ್ಮಾಣಗೊಂಡಿರುವ ಗೋಪುರ, ಬಸವಮೂರ್ತಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು, ಪ್ರತಿದಿನ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕ ಮಹದೇವಪ್ಪ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-37-1883613149

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.