ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರಬೆಟ್ಟ ವ್ಯಾಪ್ತಿಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಕುಮಾರ್, ಕಾವೇರಿ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ವಲಯ ಅಧಿಕಾರಿ ಮತ್ತು ಪ್ರಭಾರ ವಲಯ ಅರಣ್ಯಾಧಿಕಾರಿ ರಮೇಶ್ ಬಿರಾದಾರ್, ಕಾವೇರಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ವಾಗೀಶ್ ಅವರನ್ನು ಎದುರುದಾರರನ್ನಾಗಿಸಿ ನೋಟಿಸ್ ಜಾರಿ ಮಾಡಲಾಗಿದೆ.

ಎಸಿಎಫ್ ಸಂದೀಪ್ ಕುಮಾರ್ ಹಾಗೂ ಆರ್ಎಫ್ಓ ವಾಗೀಶ್ ಅವರಿಗೆ ವರದಿಯೊಂದಿಗೆ ಖುದ್ದು ಹಾಜರಾಗಲು ಉಪ ಲೋಕಾಯುಕ್ತರು ನಿರ್ದೇಶನ ನೀಡಿದ್ದು, ವಿಚಾರಣೆಯನ್ನು ಜೂನ್ 17ಕ್ಕೆ ನಿಗದಿಪಡಿಸಲಾಗಿದೆ.

ಮಾಧ್ಯಮಗಳ ವರದಿಗಳ ಆಧಾರದ ಮೇಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವಿಚಾರಣಾ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮಲೆ ಮಹದೇಶ್ವರಬೆಟ್ಟ ವ್ಯಾಪ್ತಿಯ ನಾಗಮಲೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ವೇಳೆ ಇಂಡಿಗನತ್ತ ಗ್ರಾಮದ ಬಳಿ ಚಿರತೆ ದಾಳಿಯಿಂದ ಬಾಲಕ ಹರ್ಷಿತ್ ಗೌಡ ಮೃತಪಟ್ಟಿದ್ದ. ಬಾಲಕನ ತಾಯಿ ಪವಿತ್ರಾ, ‘ಮಗನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ. ಅಧಿಕಾರಿ ಹಾಗೂ ಸಿಬ್ಬಂದಿ ಕಾಡು ಪ್ರಾಣಿಗಳ ದಾಳಿಯ ಬಗ್ಗೆ ಮಾಹಿತಿ ನೀಡಿದ್ದರೆ ನಾಗಮಲೆಗೆ ತೆರಳುತ್ತಿರಲಿಲ್ಲ’ ಎಂದು ಆರೋಪ ಮಾಡಿದ್ದರು.

‘ನಾಗಮಲೆ ಮಾರ್ಗದಲ್ಲಿ ಭಕ್ತರಿಂದ ₹ 200 ಶುಲ್ಕ ಪಡೆಯುತ್ತಿದ್ದರೂ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಕಾಡುಪ್ರಾಣಿಗಳ ಸಂಭಾವ್ಯ ದಾಳಿಯ ಬಗ್ಗೆಯೂ ಮಾಹಿತಿ ಫಲಕಗಳನ್ನು ಹಾಕಿಲ್ಲ, ಸುರಕ್ಷಿತ ಬೇಲಿ ಅಳವಡಿಸಿಲ್ಲ, ಪಾದಯಾತ್ರಿಗಳ ಸುರಕ್ಷತೆಗೆ ಸಿಬ್ಬಂದಿ ನಿಯೋಜಿಸಿರಲಿಲ್ಲ’ ಎಂಬ ಆರೋಪಗಳು ಕೇಳಿಬಂದಿದ್ದವು.

ಸಮಸ್ಯೆ ಸರಿಪಡಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿರುವ ಉಪ ಲೋಕಾಯುಕ್ತರು ನಾಲ್ಕು ವಾರಗಳೊಳಗೆ ಸ್ಪಷ್ಟನೆ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-37-1149976325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.