ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರನ ಬೆಟ್ಟದ ನಾಗಮಲೆಗೆ ಪಾದಯಾತ್ರೆ ಹೊರಟಿದ್ದ ಬಾಲಕನನ್ನು ಕೊಂದು ಹಾಕಿದ ಚಿರತೆ ಸೆರೆಗೆ ಅರಣ್ಯ ಇಲಾಖೆ ತೀವ್ರ ಶೋಧ ನಡೆಸಿದೆ.

ನಾಗಮಲೆ ಗ್ರಾಮದಲ್ಲಿಚಿರತೆಯೊಂದು ಸೋಮವಾರ ರಾತ್ರಿ ಎರಡು ಮೇಕೆಗಳನ್ನು ಹೊತ್ತೊಯ್ದಿದ್ದು, ಸ್ಥಳೀಯರ ಆತಂಕ ಹೆಚ್ಚಿದೆ.

ಮಂಗಳವಾರ ಇಲಾಖೆಯ 40 ಸಿಬ್ಬಂದಿಯನ್ನೊಳಗೊಂಡ ತಂಡ ಅರಣ್ಯದೊಳಗೆ ಕಾರ್ಯಾಚರಣೆ ನಡೆಸಿತು. ದಾಳಿ ನಡೆದ ಜಾಗದ ಸುತ್ತಮುತ್ತ ನಾಲ್ಕು ಬೋನುಗಳನ್ನು ಇರಿಸಲಾಗಿದ್ದು ಎರಡು ಥರ್ಮಲ್ ಡ್ರೋನ್ ಸೇರಿದಂತೆ ನಾಲ್ಕು ಡ್ರೋನ್ ಹಾಗೂ 20 ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗಿದೆ.

ಬಾಲಕನ ಮೇಲೆ ದಾಳಿ ನಡೆಸಿದ ಜಾಗದಲ್ಲಿ ಇರಿಸಲಾಗಿದ್ದ ಕ್ಯಾಮೆರಾದಲ್ಲಿ ಚಿರತೆ ಪತ್ತೆಯಾಗಿದ್ದು, ಶೀಘ್ರ ಸೆರೆ ಹಿಡಿಯಲಾಗುವುದು ಎಂದು ಕಾವೇರಿ ವನ್ಯಧಾಮದ ಚಾಮರಾಜನಗರ ವೃತ್ತದ ಸಿಸಿಎಫ್ ಮಾಲತಿಪ್ರಿಯಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪರಿಹಾರ: ಮೃತ ಬಾಲಕನ ಕುಟುಂಬಕ್ಕೆ ಮೊದಲ ಹಂತದಲ್ಲಿ ₹ 5 ಲಕ್ಷ ಪರಿಹಾರ ವಿತರಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಸಹಿತ ಅಗತ್ಯ ದಾಖಲೆಗಳು ಬಂದ ಬಳಿಕ ಉಳಿಕೆ ₹ 15 ಲಕ್ಷ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-38-1550345844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.