ಮಹದೇಶ್ವರ ಬೆಟ್ಟ: ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಗುರುವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ₹ 2.21 ಕೋಟಿ ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಬೆಳಿಗ್ಗೆ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

ದೇಗುಲದ ಹುಂಡಿ ಹಾಗೂ ಇ ಹುಂಡಿಯಲ್ಲಿ 22 ದಿನಗಳಲ್ಲಿ 2,21,49,797, ಚಿನ್ನ 24 ಗ್ರಾಂ, ಬೆಳ್ಳಿ 1 ಕೆಜಿ 550 ಗ್ರಾಂ ದೊರೆತಿದೆ. ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಮರಿಸ್ವಾಮಿ, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು, ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್ ಹಾಗೂ ಜಿಲ್ಲಾಡಳಿತ ಕಚೇರಿಯ ಸ್ವರ್ಣ.ಪಿ ಹಾಗೂ ಪ್ರಾಧಿಕಾರದ ಸಿಬ್ಬಂದಿ, ಪೊಲೀಸರು, ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-37-962476801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.