ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಗ್ರಾಮಗಳಲ್ಲಿ ಆರೋಗ್ಯ ಸೇವೆ ಹಾಗೂ ತುರ್ತು ನೆರವು ನೀಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಶ್ರೀರೂಪಾ ನೇತೃತ್ವದಲ್ಲಿ ಯೋಜನೆ ರೂಪಿಸಲಾಗಿದ್ದು ಅನುಷ್ಠಾನ ಸಂಬಂಧ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚರ್ಚೆ ನಡೆಯಿತು.

ಜಿಲ್ಲಾಧಿಕಾರಿ ಶ್ರೀರೂಪಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ನೂತನ ಯೋಜನೆ ಇದೇ ತಿಂಗಳಿನಿಂದ ಪ್ರಾಯೋಗಿಕವಾಗಿ ಜಾರಿಯಾಗಬೇಕು. ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ 27 ಗ್ರಾಮಗಳಿಗೆ ಜೆಎಸ್ಎಸ್ ನರ್ಸಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ತಂಡಗಳನ್ನು ನಿಯೋಜಿಸಿ ಆರೋಗ್ಯ ಸೇವೆ ಒದಗಿಸಬೇಕು ಎಂದು ಸೂಚಿಸಿದರು.

ಆರೋಗ್ಯ ಇಲಾಖೆಯ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗ್ರಾಮೀಣ ಹಾಗೂ ಕಾಡಂಚಿನ ಪ್ರದೇ ಶಗಳಲ್ಲಿ ಆರೋಗ್ಯ ಸೇವೆ ಮತ್ತು ಸಾರ್ವಜನಿಕ ಆರೋಗ್ಯ ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆರೋಗ್ಯ ಮತ್ತು ನೈರ್ಮಲ್ಯದ ಜೊತೆಗೆ ಮುಟ್ಟಿನ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಸ್ವಚ್ಛತೆಯ ಬಗ್ಗೆ ಯುವತಿಯರಲ್ಲಿ ಜಾಗೃತಿ ಮೂಡಿಸಬೇಕು, ಹಾಡಿಗಳಲ್ಲಿ ಹೆಚ್ಚಾಗಿರುವ ಮದ್ಯಪಾನ ವ್ಯಸನವನ್ನು ಜಾಗೃತಿಯ ಮೂಲಕ ನಿವಾರಣೆ ಮಾಡಬೇಕು, ಸಾರ್ವಜನಿಕಲ್ಲಿ ಆರೋಗ್ಯ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂದರು.

ಈ ಯೋಜನೆಯಿಂದ ಗಿರಿಜನ ಹಾಗೂ ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆ ದೊರೆಯಲಿದೆ. ನರ್ಸಿಂಗ್ ವಿದ್ಯಾರ್ಥಿಗಳಿಗೂ ಪ್ರಾಯೋಗಿಕ ಅನುಭವ ಸಿಗಲಿದೆ, ಗ್ರಾಮೀಣ ಆರೋಗ್ಯ ಸೇವೆಯೂ ಸುಧಾರಿಸಲಿದೆ ಎಂದರು.

ವಿದ್ಯಾರ್ಥಿಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಮಾರ್ಗದರ್ಶನ ನೀಡಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳಿಗೆ ಜಿಲ್ಲಾ ಆಡಳಿತದಿಂದ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಸಿಎಸ್ಆರ್ ಸಂಯೋಜಕಿ ರಕ್ಷಿತಾ ನಾಯಕ್, ಜೆಎಸ್ಎಸ್ ನರ್ಸಿಂಗ್ ಕಾಲೇಜಿನ ಪ್ರತಿನಿಧಿಗಳು, ಎಸ್ವೈವೈಎಂ ಸಂಸ್ಥೆಯ ಪ್ರತಿನಿಧಿಗಳು, ಇತರ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-945182796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.