ಚಾಮರಾಜನಗರ: ಬಿಜೆಪಿ, ಆರ್ಎಸ್ಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಚಾಮರಾಜನಗರ ಬಿಜೆಪಿ ಗ್ರಾಮಾಂತರ ಮಂಡಲ ಯುವ ಮೋರ್ಚಾದ ಅಧ್ಯಕ್ಷ ಎನ್.ಪ್ರದೀಪ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಶಿವುವಿರಾಟ್, ಯುವಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಉಪಾಧ್ಯಕ್ಷ ಸೋಮವಾರಪೇಟೆ ಗುರುಪ್ರಸಾದ್ ಅವರ ನೇತೃತ್ವದಲ್ಲಿ ನಗರದ ಡಿವೈಎಸ್ಪಿ ಕಚೇರಿಯಲ್ಲಿ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನವೀನ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು.

‘ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕುರಾನ್ನಲ್ಲಿ ಬರೆದಿದೆ. ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು. ಆರ್ಎಸ್ಎಸ್, ಬಿಜೆಪಿ ಅದೇ ರೀತಿಯ ವಿಷ ಸರ್ಪವು. ನೀವು ಅದನ್ನು ಕೊಲ್ಲದಿದ್ದರೆ ಬದುಕುವುದಿಲ್ಲ ಎಂದು ಮುಸಲ್ಮಾನರಿಗೆ ಆರ್ಎಸ್ಎಸ್, ಬಿಜೆಪಿ ಸದಸ್ಯರನ್ನು ಕೊಲ್ಲಬೇಕು ಎಂದು ಪ್ರಚೋದನಕಾರಿ ಹೇಳಿಕೆ ಸಮಾಜದಲ್ಲಿ ಬೆಂಕಿ ಹಚ್ಚಿ ಅಶಾಂತಿ ಉಂಟು ಮಾಡುವಂತಿದೆ’ ಎಂದು ದೂರಿದರು.

‘ಈ ಪ್ರಚೋದನಕಾರಿ ಹೇಳಿಕೆ ಸಂವಿಧಾನದ ವಿರುದ್ಧವಾಗಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಎಐಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ದೇಶಾದ್ಯಂತ ಇರುವ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರಿಗೆ ಅಪಾಯವೊಡ್ಡಲಿದೆ. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-37-1130212437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.