ಗುರುವಾರ , ಆಗಸ್ಟ್ 11, 2022
27 °C

ಚಾಮರಾಜನಗರ: 19ರಂದು ಮೆಗಾ ಲೋಕ ಅದಾಲತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಸೇರಿದಂತೆ ಜಿಲ್ಲೆಯ ಎಲ್ಲ ನ್ಯಾಯಾಲಯಳಲ್ಲಿ ಇದೇ 19ರಂದು ಮೆಗಾ ಲೋಕ ಅದಾಲತ್‌ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್‌.ಸುಲ್ತಾನ್‌ಪುರಿ ಅವರು ಹೇಳಿದ್ದಾರೆ. 

ಅದಾಲತ್‌ನಲ್ಲಿ ಯಾವುದೇ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಬಹುದು. ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಬೈಠಕ್‌ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಲೋಕ್ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ.

ಈಗಾಗಲೇ ಆರಂಭ: ಮೆಗಾ ಲೋಕ್ ಅದಾಲತ್‌ಗೆ ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಬಹುದಾದ ಪ್ರಕರಣಗಳನ್ನು ಈಗಿನಿಂದಲೇ ಗುರುತಿಸಲಾಗುತ್ತಿದೆ. ಲೋಕ ಅದಾಲತ್‌ ಈಗಾಗಲೇ ಆರಂಭಗೊಂಡಿದ್ದು,  ಇದೇ 19ರವರೆಗೆ ನಿರಂತರವಾಗಿ ನಡೆಯಲಿದೆ ಎಂದು ನ್ಯಾಯಾಧೀಶರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಬಿಟ್ಟು, ಇತರ ಸಿವಿಲ್ ಪ್ರಕರಣಗಳು, ದಾಂಪತ್ಯ ಜೀವನ ಸಂಬಂಧ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆ ಕುರಿತ ಎಲ್ಲ ಪ್ರಕರಣಗಳು, ವಾಹನ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣಗಳು, ಕೈಗಾರಿಕಾ ವಿವಾದ ಕಾಯ್ದೆ ಅಡಿಯಲ್ಲಿರುವ ಪ್ರಕರಣಗಳು, ದಂಡ ಪ್ರಕ್ರಿಯಾ ಸಂಹಿತೆ ಕಲಂ 320(1) ಮತ್ತು 320(2) ಅಡಿಯಲ್ಲಿ ರಾಜಿ ಮಾಡಿಕೊಳ್ಳಬಹುದಾದ ಎಲ್ಲ ಅಪರಾಧಗಳು, ಚೆಕ್‌ ಅಮಾನ್ಯ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಕಳವಿಗೆ ಸಂಬಂಧಿಸಿದ ಪ್ರಕರಣಗಳು, ಅಕ್ರಮ ಕಲ್ಲು, ಮರಳು ಸಾಗಾಣಿಕೆಗೆ ಸಂಬಂಧಿಸಿದ ಅಪರಾಧಗಳು, ಇತರೆ ಯಾವುದೇ ಅಪರಾಧಿಕ ಸ್ವರೂಪದ ರಾಜಿ ಆಗಬಹುದಾದ ಪ್ರಕಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳಬಹುದು. 

ಪಕ್ಷಗಾರರು ಸಂಧಾನಕಾರರ ರಾಜಿಸೂತ್ರಕ್ಕೆ ಒಪ್ಪಿದಲ್ಲಿ ಮಾತ್ರ ಪ್ರಕರಣವನ್ನು ರಾಜಿ ಸಂಧಾನದ ಪ್ರಕಾರ ಇತ್ಯರ್ಥಪಡಿಸಲಾಗುತ್ತದೆ. ಲೋಕ ಅದಾಲತ್‌ ಆದೇಶದ ವಿರುದ್ಧ ಮೇಲ್ಮನವಿಗೆ ಅವಕಾಶ ಇಲ್ಲ. ಹಾಗಾಗಿ, ಅದಾಲತ್‌ನಲ್ಲಿ ನೀಡುವ ಆದೇಶವೇ ಅಂತಿಮ ಎಂದು ನ್ಯಾಯಾಧೀಶರು ಹೇಳಿದ್ದಾರೆ. 

723 ಪ್ರಕರಣ ಇತ್ಯರ್ಥ

ಸೆ.19ರಂದು ನಡೆಸಲಾದ ಲೋಕ ಅದಾಲತ್ ನಲ್ಲಿ 723 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ಇದೇ 19ರಂದು ನಡೆಸಲಾಗುವ ಲೋಕ ಅದಾಲತ್‌ಗೆ ಪಕ್ಷಗಾರರು ನೇರವಾಗಿ ಹಾಜರಾಗಬಹುದು. ಇಲ್ಲವೇ ಕೋವಿಡ್‌ ಕಾರಣದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕವೂ ಹಾಜರಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದು ಎಂದು ಸದಾಶಿವ ಎಸ್‌.ಸುಲ್ತಾನಪುರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು