ಹನೂರು(ಚಾ.ನಗರ ಜಿಲ್ಲೆ): ಹಲವು ತಿಂಗಳುಗಳಿಂದ ಸಾರ್ವಜನಿಕರು ಕುಡಿಯುವ ನೀರಿಲ್ಲದೆ ಪರಿತಪಿಸುತ್ತಿದ್ದರೂ ಕ್ಷೇತ್ರಕ್ಕೆ ಬಂದು ಸಮಸ್ಯೆ ಆಲಿಸದ ಸಚಿವರು ಈಗ ಬಂದಿರುವುದೇಕೆ ಎಂದು ಕೌದಳ್ಳಿ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುತ್ತಿಗೆ (ಘೇರಾವ್) ಹಾಕಿದರು.

ಶನಿವಾರ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಅರಿಯಲು ಆಗಮಿಸಿದ್ದ ವೇಳೆ ಸಿಟ್ಟಿಗೆದ್ದ ಕೌದಳ್ಳಿ ಗ್ರಾಮಸ್ಥರು ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಮರ್ಪಕವಾಗಿ ಸ್ಪಂದಿಸಿಲ್ಲ. ಗ್ರಾಮದಲ್ಲಿ ಬೋರ್ವೆಲ್ ಕೊರೆಸಿ ನೀರು ಕೊಟ್ಟಿಲ್ಲ, ಮೂರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಜನರು ಕಂಗಲಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಜನರ ಸಿಟ್ಟಿಗೆ ಸಚಿವರು ಪ್ರತಿಕ್ರಿಯೆ ನಿಡದೆ ಮುಂದೆ ನಡೆದರು.

ಮಾಜಿ ಶಾಸಕ ಆರ್.ನರೇಂದ್ರ ಅವರಿಗೆ ಮಾಹಿತಿ ನೀಡದೆ, ವಿಶ್ವಾಸಕ್ಕೆ ತೆಗೆದುಕೊಳ್ಳದೆ ಗ್ರಾಮಗಳಿಗೆ ಭೇಟಿನೀಡುತ್ತಿರುವುದು ಸರಿಯಲ್ಲ ಎಂದು ಬೆಂಬಲಿಗರು ಕೂಡ ಸಚಿವರ ನಡೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮೂರು ಬಾರಿ ಶಾಸಕರಾಗಿದ್ದ ನರೇಂದ್ರ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಸರಿಯಲ್ಲ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವ ಹಾಗೂ ಪಕ್ಷ ಸಂಘಟನೆ ಮಾಡಿರುವ ಮಾಜಿ ಶಾಸಕರನ್ನು ಗ್ರಾಮಕ್ಕೆ ಕರೆತರದಿರುವುದು ನೋವು ತಂದಿದೆ. ಬದಲಾಗಿ ಹಾಲಿ ಶಾಸಕ ಮಂಜುನಾಥ್ ಅವರಿಗೆ ಮನ್ನಣೆ ನೀಡುತ್ತಿರುವುದು ಬೇಸರ ತರಿಸಿದೆ.

ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ಮರೆಯಬಾರದು. ನರೇಂದ್ರ ಹಾಗೂ ಅವರ ಕುಟುಂಬ ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸುತ್ತಾ ಬಂದಿದ್ದರೂ ಅವರನ್ನು ದೂರ ಇಟ್ಟಿರುವುದು ಸರಿಯಲ್ಲ ಎಂದು ಕೌದಳ್ಳಿ ಗ್ರಾಮದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು, ಟಿಎಪಿಸಿಎಂಎಸ್ ಅಧ್ಯಕ್ಷ ಗೋವಿಂದರಾಜು ಹಾಗೂ ಪಕ್ಷದ ಇತರೆ ಪದಾಧಿಕಾರಿಗಳು ಅಸಮಾಧಾನ ತೋಡಿಕೊಂಡರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕ ಶಿವಕುಮಾರ್, ಪ್ರವೀಣ್ ಕುಮಾರ್, ಕೌದಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಾರಕ್ಕ, ಮಾಜಿ ಸದಸ್ಯರಾದ ವಾಜಿದ್ ಖಾನ್, ನಸ್ರುಲ್ಲಾ ಬೇಗ್, ನವೀದ್ ಶರೀಫ್, ಶುಕೂರ್ ಬೇಗ್ ಸರ್ದಾರ್ ಪಾಷಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-37-1090159759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.