ಚಾಮರಾಜನಗರ: ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಮೌನಿಯಾಗಿದ್ದ ಪ್ರಧಾನಿ ಮೋದಿ ಚುನಾವಣೆ ನಂತರ ದೇಶದ ಜನರಿಗೆ ಮಿತವ್ಯಯದ ಪಾಠ ಮಾಡಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ದರ ಏರಿಕೆ ಮಾಡಿದ್ದು ಸರಿಯೇ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರಶ್ನಿಸಿದರು.

ನಗರದಲ್ಲಿ ಶನಿವಾರ ಮಾತನಾಡಿ ‘ಯುದ್ಧ ಆರಂಭವಾದಾಗಲೇ ಎಚ್ಚೆತ್ತುಕೊಂಡು ದೇಶದ ಆರ್ಥಿಕ ಪರಿಸ್ಥಿತಿಯನ್ನು ತಹಬದಿಯಲ್ಲಿ ಇಟ್ಟುಕೊಳ್ಳಬೇಕಿದ್ದ ಪ್ರಧಾನಿ ಚುನಾವಣೆ ಮುಗಿಯುವರೆಗೂ ಕಾದು ಬಳಿಕ ಚಿನ್ನ ಖರೀದಿಸಬೇಡಿ, ವಿದೇಶ ಪ್ರವಾಸ ಮಾಡಬೇಡಿ, ತೈಲ ಕಡಿಮೆ ಬಳಸಿ ಎಂದು ಉಪದೇಶ ನೀಡಿರುವುದು ಹಾಸ್ಯಾಸ್ಪದ ಎಂದರು.

ಕೋವಿಡ್ ಬಂದಾಗಲೂ ವೈಜ್ಞಾನಿಕ–ವೈಚಾರಿಕ ವಿಚಾರಗಳನ್ನು ಪಾಲಿಸುವಂತೆ ಜನರಿಗೆ ಕರೆ ಕೊಡುವ ಬದಲು ಗಂಟೆ ಹೊಡೆಯಿರಿ, ಜಾಗಟೆ ಬಾರಿಸಿ, ದೀಪ ಹಚ್ಚಿ ಎಂದೆಲ್ಲ ಮೌಢ್ಯ ಬಿತ್ತುವ ಮೂಲಕ ಸಾಂವಿಧಾನಿಕ ಜವಾಬ್ದಾರಿಯನ್ನೇ ಮರೆತರು ಎಂದು ವ್ಯಂಗ್ಯವಾಡಿದರು.

ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಸಾಂವಿಧಾನಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ನಡವಳಿಕೆಗಳನ್ನು ಸಮರ್ಥವಾಗಿ ನಿಭಾಯಿಸಿದರು. ಆದರೆ, ಪ್ರಧಾನಿ ಮೋದಿ ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು ಅಧಿಕಾರ ಅನುಭವಿಸುತ್ತಿದ್ದಾರೆ. ನೋಟು ಅಮಾನ್ಯ, ಬೆಲೆ ಏರಿಕೆಯ ಮೂಲಕ ದೇಶದ ಆರ್ಥಿಕತೆಗೆ ಪೆಟ್ಟು ಕೊಟ್ಟಿದ್ದಾರೆ ಎಂದು ಟೀಕಿಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಬದಲು ರಾಜ್ಯ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ತೈಲ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ. ರಾಜ್ಯದಿಂದ ಸಾವಿರಾರು ಕೋಟಿ ಜಿಎಸ್ಟಿ ಸಂಗ್ರಹಿಸುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಪಾಲನ್ನೂ ನೀಡುತ್ತಿಲ್ಲ ಎಂದು ಸಚಿವ ಮಹದೇವಪ್ಪ ತಿರುಗೇಟು ನೀಡಿದರು.

ಸಂವಿಧಾನ ಪ್ರತಿಯೊಬ್ಬರಿಗೂ ಧಾರ್ಮಿಕ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದ್ದು ರಾಜಕೀಯ ಕಾರಣಕ್ಕೆ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ವಿರೋಧಿಸುವುದು ಸರಿಯಲ್ಲ. ಧಾರ್ಮಿಕ ಆಚರಣೆಗಳ ಪಾಲನೆಗೆ ಎಲ್ಲ ಧರ್ಮದವರಿಗೂ ಅವಕಾಶವಿದೆ ಎಂದರು.

ಎಸ್ಐಆರ್ ಷಡ್ಯಂತ್ರ: ಮತದಾರರ ಪಟ್ಟಿ ಪರಿಷ್ಕರಣೆ ಕಾಲಕಾಲಕ್ಕೆ ನಡೆಯುತ್ತಾ ಬಂದಿದ್ದರೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತ ಚಲಾಯಿಸುವ ಮೂಲಭೂತ ಹಕ್ಕುಗಳನ್ನೇ ಕಸಿದುಕೊಳ್ಳಲಾಗುತ್ತಿದ್ದು ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸಲಾಗುತ್ತಿದೆ. ಮುಂದೆ ಎಸ್ಐಆರ್ ಹಾಗೂ ಎನ್ಆರ್ಸಿಯನ್ನು ಒಂದುಗೂಡಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರನ್ನು ದೇಶದ ಪ್ರಜೆಗಳಲ್ಲ ಎಂದು ಘೋಷಿಸುವ ಹುನ್ನಾರ ನಡೆಯುತ್ತಿದೆ ಎಂದು ಹೇಳಿದರು.

ಸರ್ವಾಧಿಕಾರ ಕೊನೆಯಾಗಬೇಕು, ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬರಬೇಕು ಎಂಬ ಉದ್ದೇಶದಿಂದ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ್ದರು. ಆದರೆ, ಬಿಜೆಪಿ ಹಾಗೂ ಆರ್ಎಸ್ಎಸ್ ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಸಮಾಧಾನಕರ ಸೂತ್ರ: ಶೋಷಿತ ಸಮುದಾಯಗಳು ಒಗ್ಗಟ್ಟಾಗಿರಬೇಕು, ಪರಿಶಿಷ್ಟ ಜಾತಿಯ ಎಲ್ಲ 101 ಜಾತಿಗಳಿಗೂ ಮೀಸಲಾತಿಯ ಲಾಭ ಸಿಗಬೇಕು ಎಂಬ ಆಶಯಗಳೊಂದಿಗೆ ರಾಜ್ಯ ಸರ್ಕಾರ ‘ಸಮಾಧಾನಕರ ಸೂತ್ರ’ ಜಾರಿಗೊಳಿಸಿದೆ. ಸಮುದಾಯದ ಕೆಲವರು ಒಳಮೀಸಲಾತಿಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-37-730773557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.