ಚಾಮರಾಜನಗರ: ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ನೂತನ ಸಚಿವ ಸಂಪುಟದಲ್ಲಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಕನ್ನಡ ಧ್ವಜ ಹಿಡಿದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯದ ಗಡಿಪ್ರದೇಶವಾದ ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯಾಗಲು ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಜಿಲ್ಲೆಯ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸತತ 4 ಬಾರಿ ಗೆದ್ದಿರುವ ಶಾಸಕ ಸಿ.ಪುಟ್ಟರಂಗಶೆಟ್ಟಿ, ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಪುತ್ರ 3 ಬಾರಿ ಶಾಸಕರಾಗಿರುವ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಂಡಕ್ಟರ್ ಸೋಮನಾಯಕ, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ಜಗದೀಶ್, ಅರುಣ್ ಕುಮಾರ್ ಗೌಡ, ಹೊಂಗನೂರು ಕೆಂಪರಾಜು, ರವಿಚಂದ್ರ ಪ್ರಸಾದ್ ಕಹಳೆ, ರಾಚಪ್ಪ, ಅಮಚವಾಡಿ ರಾಜು, ಶಿವು, ಮುತ್ತಿಗೆ ಗೋವಿಂದರಾಜು, ಚಾ.ಸಿ.ಸಿದ್ದರಾಜು, ತಾಂಡವಮೂರ್ತಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-37-2105262080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.