ಹನೂರು: ತಾಲ್ಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪದ ನೀರಿನ ತೊಟ್ಟಿಗೆ ನೀರು ತುಂಬಿಸದಿರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ನೀರಿನ ತೊಟ್ಟಿಗೆ ನೀರು ತುಂಬಿಸಿ ಸಮಸ್ಯೆ ಬಗೆಹರಿಸುವಂತೆ ರೈತ ಮುಖಂಡರು ಒತ್ತಾಯಿಸಿದ ಪರಿಣಾಮ ಪಂಚಾಯಿತಿಯಿಂದ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.

‘ಕೊಪ್ಪದಲ್ಲಿ ನೂರಾರು ದನಗಳಿದ್ದು, ಅರಣ್ಯದಲ್ಲಿ ಮೇವು ಮೇಯ್ದು ಬಂದ ನಂತರ ನೀರು ಕುಡಿಯಲು ತೊಟ್ಟಿಯಲ್ಲಿ ನೀರಿಲ್ಲದೆ ಇರುವುದರಿಂದ ಜಾನುವಾರುಗಳು ಪರಿತಪಿಸುತ್ತಿದೆ. ಇದರಿಂದ ಜಾನುವಾರುಗಳಿಗೂ ನೀರಿನ ಹಾಹಾಕಾರ ಉಂಟಾಗಿತ್ತು. ಈ ಬಗ್ಗೆ ಸ್ಥಳೀಯ ರೈತರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆ ಕುಡಿಯುವ ನೀರಿನ ಸಲುವಾಗಿ ಟ್ಯಾಂಕರ್ ಮೂಲಕ ತೊಟ್ಟಿಗಳಿಗೆ ನೀರು ತುಂಬಿಸುತ್ತಿದೆ. ನೀರು ಪೋಲಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಾಗಿದೆ. ಬೇಸಿಗೆಯಲ್ಲಿ ತಮ್ಮ ಜಾನುವಾರುಗಳಿಗೆ ತೊಟ್ಟಿ ನೀರನ್ನು ಬಳಸಿಕೊಳ್ಳಬಹುದು’ ಎಂದು ಗ್ರಾಮ ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-37-1332271507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.