ಸಂತೇಮರಹಳ್ಳಿ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಶನಿವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಗೆ ಒಳಪಡುವ ಜನ್ನೂರು, ಕೆಂಪನಪುರ, ಸುತ್ತೂರು, ಇರಸವಾಡಿ, ಸಂತೇಮರಹಳ್ಳಿ, ಉಮ್ಮತ್ತೂರು, ಗಣಗನೂರು, ಬಾಗಳಿ ಸೇರಿದಂತೆ ನಾನಾ ಗ್ರಾಮಗಳಿಂದ ಕುಡಿಯುವ ನೀರಿನ ಸಮಸ್ಯೆ, ರಸ್ತೆ ಹಾಗೂ ಚರಂಡಿ ನಿರ್ಮಾಣ, ದೇವಸ್ಥಾನ ನಿರ್ಮಾಣ, ನಿಗಮದಲ್ಲಿ ಕೊಳವೆ ಬಾವಿ ಉದ್ಯೋಗ ಸೇರಿದಂತೆ 34 ಅರ್ಜಿಗಳನ್ನು ನೀಡಲಾಯಿತು.

ಅರ್ಜಿ ಸ್ವೀಕರಿಸಿದ ಶಾಸಕರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಕೊಳ್ಳೇಗಾಲ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ವಂಚಿತವಾಗಿರುವ ಗ್ರಾಮಗಳನ್ನು ಗುರುತಿಸಿ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಕಮರವಾಡಿ ಗೇಟ್ನಿಂದ ಬಸವಟ್ಟಿ ಗೇಟ್ ವರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯಿಂದ 34 ಅರ್ಜಿಗಳು ಬಂದಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಚಾಮುಲ್ ನಾಮನಿರ್ದೇಶಕ ಕಮರವಾಡಿ ರೇವಣ್ಣ, ಕೆಇಬಿ ಎಇಇ ಪ್ರಶಾಂತ್, ಎಇ ಮುದ್ದುರಾಜು, ಮುಖಂಡರಾದ ಉಮ್ಮತ್ತೂರು ಶಿವಣ್ಣ, ಸಂತೇಮರಹಳ್ಳಿ ಪಶಿ, ಗಣಗನೂರು ನಾಗಯ್ಯ, ಜನ್ನೂರು ಮಹದೇವಸ್ವಾಮಿ, ಸಂತೇಮರಹಳ್ಳಿ ಮಹೇಶ್, ಹೊನ್ನೂರು ರಾಘವೇಂದ್ರ, ಕಂದಹಳ್ಳಿ ನಂಜುಂಡಸ್ವಾಮಿ ಈ ಸಂದರ್ಭದಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-37-1714956450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.