ಬುಧವಾರ, ಜುಲೈ 28, 2021
26 °C
ಕೋವಿಡ್‌ ವಿರುದ್ಧದ ಹೋರಾಟ, ಮುಖ್ಯಮಂತ್ರಿಗೆ ಚೆಕ್‌ ಹಸ್ತಾಂತರ

ಚಾಮರಾಜನಗರ: ಮಲೆ ಮಹದೇಶ್ವರಸ್ವಾಮಿ ಪ್ರಾಧಿಕಾರ, ನೌಕರರಿಂದ ₹60 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್‌–19 ವಿರುದ್ಧದ ಹೋರಾಟಕ್ಕಾಗಿ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ₹50 ಲಕ್ಷ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವತಿಯಿಂದ ₹10 ಲಕ್ಷ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿದೆ. 

ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌, ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೂ ಆಗಿರುವ ಜಯವಿಭವ ಸ್ವಾಮಿ ಹಾಗೂ ಸಿಬ್ಬಂದಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಚೆಕ್‌ಗಳನ್ನು ಹಸ್ತಾಂತರಿಸಿದರು. 

 ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ನೀಡಿದ ಮೂರು ದಿನಗಳ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. 

ಇದರ ಜೊತೆಗೆ, ಖಾದಿ ಗ್ರಾಮಾದ್ಯೋಗ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿವೃತ್ತ ಅಧಿಕಾರಿಗಳು ಹಾಗೂ ನೌಕರರು ತಮ್ಮ ಒಂದು ದಿನದ ವೇತನದ ₹2,15,158 ಮೊತ್ತ ಹಾಗೂ ಮಂಡಳಿಯ ಅಧಿಕಾರಿಗಳು ಹಾಗೂ ನೌಕರರು ಒಂದು ದಿನದ ಮೊತ್ತ ₹1,92,816 ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. ಈ ಚೆಕ್‌ಗಳನ್ನೂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು. 

ಸಚಿವರಾದ ಭೈರತಿ‌ ಬಸವರಾಜು, ಕೋಟ ಶ್ರೀನಿವಾಸ ಪೂಜಾರಿ, ಪ್ರಾಧಿಕಾರದ ನೌಕರರಾದ ಪ್ರಕಾಶ್‌, ಕೆ.ಮಹದೇವಸ್ವಾಮಿ, ಖಾದಿ ಮಂಡಳಿಯ ಸಿಬ್ಬಂದಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು