ಸಂತೇಮರಹಳ್ಳಿ: ಇಲ್ಲಿನ ಬಡಗಲ ಮೋಳೆ ಗ್ರಾಮದ ಬಳಿ ಇರುವ ಹೊನಗಣ ಕಟ್ಟೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಹೂಳು ತೆಗೆಯುವ ಕಾಮಗಾರಿ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಯಲಕ್ಕೂರು, ಹೆಗ್ಗವಾಡಿ, ತೆಂಕಲಮೋಳೆ, ಬಡಗಲ ಮೋಳೆ ಹಾಗೂ ಕುದೇರು ಗ್ರಾಮಗಳು ಸೇರಿವೆ. ಗ್ರಾಮಗಳಲ್ಲಿ ಜಾಬ್ ಕಾರ್ಡ್ ಹೊಂದಿರುವ ಫಲಾನುಭವಿಗಳ ಮನೆ ಬಳಿ ಸಿಬ್ಬಂದಿ ತೆರಳಿ ಕಾರ್ಡ್ದಾರರಿಂದ ಇಕೆವೈಸಿ ಮಾಡಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಅಭಿವೃದ್ಧಿ, ನೀರು ಕಾಲುವೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆಸಕ್ತಿ ಇರುವ ಕಾರ್ಮಿಕರು ಗ್ರಾಮ ಪಂಚಾಯಿತಿಗೆ ಉದ್ಯೋಗಕ್ಕಾಗಿ ಮನವಿ ನೀಡಿದರೆ ಸಂಬಂಧಪಟ್ಟ ಗ್ರಾಮಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡಲಾಗುವುದು ಎಂದರು.

ಜಾಬ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕು. ಫಲಾನುಭವಿಯ ಖಾತೆಗೆ ನೇರವಾಗಿ ನಿತ್ಯ ರೂ 370 ಹಣ ಜಮೆಯಾಗಲಿದೆ. ಇದರ ಪ್ರಯೋಜನ ಪಡೆದುಕೊಳ್ಳಲು ಕಾರ್ಮಿಕರು ಮುಂದಾಗಬೇಕು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-37-186459251

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.