ಚಾಮರಾಜನಗರ: ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಸಾಧಾರಣ ಮಳೆ ಸುರಿಯಿತು. ಮಧ್ಯಾಹ್ನದವರೆಗೂ ಇದ್ದ ಬಿಸಿಲಿನ ವಾತಾವರಣ ಸಂಜೆಯಾಗುತ್ತಿದ್ದಂತೆ ಕರಗುತ್ತಾ ದಿಢೀರ್ ಕೆಲಕಾಲ ಮಳೆ ಸುರಿಯಿತು.

ಬಿರು ಬಿಸಿಲಿಗೆ ಬಳಲಿದ್ದ ಸಾರ್ವಜನಿಕರಿಗೆ ಮಳೆ ತಂಪಾದ ಅನುಭವ ನೀಡಿತು. ವಾರದಿಂದೀಚೆಗೆ ಜಿಲ್ಲೆಯಾದ್ಯಂತ ಹದ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಬಿರುಸುಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಬಿತ್ತನೆ ಮಾಡಲು ರೈತರು ಭೂಮಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬಿತ್ತನೆ, ಬೀಜ, ರಸಗೊಬ್ಬರ ಸಹಿತ ಅಗತ್ಯ ಪರಿಕರಗಳನ್ನು ಸಜ್ಜು ಮಾಡಿಕೊಳ್ಳುತ್ತಿದ್ದಾರೆ.

ಈಗ ಬಿದ್ದಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಸಾಲುವುದಿಲ್ಲ. ಭೂಮಿಯ ಒಡಲು ನೆನೆಯುವಷ್ಟು ಮಳೆ ಬಿದ್ದರೆ ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ ಎನ್ನುತ್ತಾರೆ ರೈತ ಗುರುಶಾಂತಪ್ಪ.

ಬಿಸಿಲಿನ ಝಳಕ್ಕೆ ನಗರ, ಪಟ್ಟಣ ಸಹಿತ ಗ್ರಾಮಾಂತರ ಭಾಗಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು ಉತ್ತಮ ಮಳೆ ಸುರಿದರೆ ಸಮಸ್ಯೆ ಪರಿಹಾರವಾಗಲಿದೆ. ಕಾಡಿನೊಳಗೂ ಕೆರೆ ಕಟ್ಟೆಗಳಿಗೆ ನೀರು ಹರಿದು ವನ್ಯಜೀವಿಗಳ ದಾಹ ನೀಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-37-1066994317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.